ವ್ಯಾಸಂಗ ಜತೆಗೆ ಸಮಾಜ ಅನಿಷ್ಟ ತೊಲಗಿಸಿ: ಮಾವಳ್ಳಿ ಶಂಕರ್
ಹಾಸನ: ವಿದ್ಯಾರ್ಥಿಗಳು ವ್ಯಾಸಂಗದ ಜತೆಗೆ ಸಮಾಜದ ಅನಿಷ್ಟಗಳನ್ನು ಹೋಗಲಾಡಿಸುವಂತಹ ಕಾರ್ಯವನ್ನು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.
ಕರ್ನಾಟಕ ಯುವ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾನುವಾರ ನಡೆದ ಬಿ.ವಿ.ಚಂದ್ರಪ್ರಸಾದ್ ತ್ಯಾಗಿಯವರ ನೆನಪಿನಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ವ್ಯಾಸಂಗದಲ್ಲಿ ತೊಡಗಿಕೊಳ್ಳದೆ ಸಮಾಜದಲ್ಲಿನ ಅನಿಷ್ಟಗಳ ವಿರುದ್ಧ ಹೋರಾಡಬೇಕು ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಕೆವೈಡಿಎಸ್ಎಸ್ ಜಿಲ್ಲಾಧ್ಯಕ್ಷ ಸಿ.ಕ್ರಾಂತಿ ಪ್ರಸಾದ್ ತ್ಯಾಗಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಚ್.ವಿ.ನಾಗರಾಜು, ಸಮಾಜ ಸೇವಕ ಅಮ್ಜದ್ ಕಾನ್, ಎಸ್.ಎನ್.ಮಂಜುನಾಥ್ ದತ್ತ, ವಿಜಯ್ ಕುಮಾರ್, ಕೃಷ್ಣದಾಸ್ ಹಾಗೂ ಇತರರು ಇದ್ದರು.