ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅರಸು ನಿಗಮಕ್ಕೆ ಹೆಚ್ಚು ಅನುದಾನ ನೀಡಿ

Srinivasa Murthy VN
Updated On : 29 Aug 2013, 10:07 am

ಕಪ್ರ ವಾರ್ತೆ ಚನ್ನರಾಯಪಟ್ಟಣ ಆ.29
ದೇವರಾಜು ಅರಸು ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದು, ಅವರ ಕೊಡುಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬುನಾದಿಯಾಗಿವೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.  
ಪಟ್ಟಣದ ಹೊರವಲಯದ ಗೂರಮಾರನಹಳ್ಳಿ  ಮೊರಾರ್ಜಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ದೇವರಾಜು ಅರಸು ಜನ್ಮದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜು ಅರಸು ಕೊಡುಗೆ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಅವರ ಹೆಸರಿನಲ್ಲಿ ಸ್ಥಾಪಿಸಿರುವ ನಿಗಮಕ್ಕೆ ನೀಡುತ್ತಿರುವ ಅನುದಾನ ಕಡಿಮೆಯಿದ್ದು, ಅದನ್ನು ಶೇ.300ರಷ್ಟು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಇಂದಿನ ಜನ ಸಾಂದ್ರತೆ ಅರಿಯಬೇಕು: ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸ್ಥಾಪಿಸಿರುವ ನಿಗಮ 30 ವರ್ಷಗಳ ಜನಸಂಖ್ಯೆಯ ಆಧಾರದಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಇಂದಿನ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಕೇವಲ ವಿದ್ಯಾರ್ಥಿಗಳ ವಸತಿ ನಿಲಯಗಳ ಉಸ್ತುವಾರಿ ತಮ್ಮ ಕರ್ತವ್ಯವಾಗಿದೆ ಎಂಬಂತೆ ವರ್ತಿಸುತ್ತಿದ್ದು, ಇಲಾಖೆ ವತಿಯಿಂದ ನೀಡುತ್ತಿರುವ ಸಮುದಾಯ ಭವನಗಳನ್ನು ಎಲ್ಲಿಯೂ ಸ್ಥಾಪಿಸುವಲ್ಲಿ ಮುಂದಾಗಿಲ್ಲ. ಪಟ್ಟಣದ ಶಾದಿ ಮಹಲ್ ಕಟ್ಟಡ ಅರ್ಧಕ್ಕೆ ನಿಂತಿದ್ದು, ಕಟ್ಟಡ ಪೂರ್ಣಗೊಳಿಸಲು ಇಲಾಖೆ ವತಿಯಿಂದ ನೀಡುವ ಅನುದಾನಕ್ಕೆ ಯಾವುದೇ ಒತ್ತಾಯ ಮಾಡಿಲ್ಲ ಎಂದು ಆರೋಪಿಸಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜು ಅರಸು ಕೊಡುಗೆ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಅವರ ಹೆಸರಿನಲ್ಲಿ ಸ್ಥಾಪಿಸಿರುವ ನಿಗಮಕ್ಕೆ ನೀಡುತ್ತಿರುವ ಅನುದಾನ ಕಡಿಮೆಯಿದ್ದು, ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಮೊರಾರ್ಜಿ ಶಾಲೆ ನಿರ್ಮಾಣಕ್ಕೆ ನಿವೇಶನ ನೀಡಿ: ಬಾಗೂರು ಹೋಬಳಿ ಓಬಳಾಪುರ ಬಳಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ 20 ಎಕರೆ ಪ್ರದೇಶದಲ್ಲಿ 10 ಎಕರೆ ಜಮೀನನ್ನು ಮೊರಾರ್ಜಿ ಶಾಲೆ ನಿರ್ಮಾಣಕ್ಕೆ ನಿವೇಶನವನ್ನು ಹಸ್ತಾಂತರಿಸುವಂತೆ ಕಂದಾಯ ಇಲಾಖೆಗೆ ಒತ್ತಾಯಿಸಲಾಗಿದೆ. ಭೂಮಿ ಹಸ್ತಾಂತರದ ನಂತರದಲ್ಲಿ ಮೊರಾರ್ಜಿ ಶಾಲೆ ತೆರೆಯಲಾಗುವುದು ಎಂದು ತಿಳಿಸಿದರು.
ನುಗ್ಗೇಹಳ್ಳಿ ಮೊರಾರ್ಜಿ ಶಾಲೆಗೆ ನಿವೇಶನ ಮಂಜೂರಾಗಿದ್ದು, ತಕ್ಷಣದಲ್ಲಿಯೇ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಿವಶಂಕರ್ ಕುಂಠೆ ಕಾರ್ಯಕ್ರಮ ಉಧ್ಘಾಟಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾ ಶ್ರೀನಿವಾಸ್, ಉಪನ್ಯಾಸಕ ನಂಜುಂಡಸ್ವಾಮಿ, ತಹಸೀಲ್ದಾರ್ ನಟರಾಜು, ತಾಪಂ ಸದಸ್ಯರಾದ ಕಮಲ, ಸವಿತಾರಮೇಶ್, ಗೌರಮ್ಮ ಪುರಸಭಾ ಸದಸ್ಯೆ ಭಾರತಿ ರಂಗಸ್ವಾಮಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement