ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾಲೂಕು ಮಟ್ಟದ ಕ್ರೀಡಾಕೂಟ

Srinivasa Murthy VN
Updated On : 29 Aug 2013, 10:05 am

ಹಾಸನ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಗರದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆಸಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ವೈದ್ಯ ಮುನಿವೆಂಕಟೇಗೌಡ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಕ್ರೀಡೆಯು ಯಾವಾಗಲೂ ಸ್ಪರ್ಧಾತ್ಮಕ ಹಾಗೂ ಆರೋಗ್ಯಕರವಾಗಿರಬೇಕು ಎಂದು   ಕಿವಿಮಾತು ಹೇಳಿದರು.  ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶಿವಾನಂದ, ಬಿಇಒ ಪುಟ್ಟರಾಜು, ದೈಹಿಕ ಶಿಕ್ಷಣಾಧಿಕಾರಿ ಈಶ್ವರಪ್ಪ, ಪತ್ರಕರ್ತ ಆರ್.ಪಿ.ವೆಂಕಟೇಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಕುಡಿಯುವ ನೀರಿನ ಸಮಸ್ಯೆ: ಹೊನಗಾನಹಳ್ಳಿ ಗ್ರಾಮಸ್ಥರ ಆಕ್ರೋಶ
ರಾಮನಾಥಪುರ:
ಇಲ್ಲಿಗೆ ಸಮೀಪದ ಹಂಡ್ರಂಗಿ ಪಂಚಾಯ್ತಿ ವ್ಯಾಪ್ತಿಗೆ ಬರುವ ಹೊನಗಾನಹಳ್ಳಿ ಗ್ರಾಮಸ್ಥರು ಇಲ್ಲಿನ ಪಂಚಾಯ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಮೋಟಾರ್ ಕೆಟ್ಟು ವಾರವಾಗುತ್ತಿದ್ದು, ಇಲ್ಲಿನ ಗ್ರಾಮಸ್ಥರು ದಿನನಿತ್ಯ ಎರಡು ಕಿ.ಮೀ ನಷ್ಟು ದೂರ ಕ್ರಮಿಸಿ ಕುಡಿಯುವ ನೀರು ಹೊತ್ತು ತರುತ್ತಿದ್ದು ಈ ಬಗ್ಗೆ ಇಲ್ಲಿನ ಪಂಚಾಯ್ತಿಗೆ ಸಾಕಷ್ಟು ಮನವರಿಕೆ ಮಾಡಿದರೂ ಕುಡಿಯುವ ನೀರಿನ ಅವ್ಯವಸ್ಥೆ ಸರಿಪಡಿಸದೆ ಹಾಗೂ ಒಂದು ಹ್ಯಾಂಡ್ ಪಂಪ್ ವ್ಯವಸ್ಥೆ ಕೂಡ ಒದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆಪಕ್ಕೆ ಮಾತ್ರ ಅಧಿಕಾರಿ: ಇಲ್ಲಿ ನೆಪಕ್ಕೆ ಮಾತ್ರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇದ್ದು ಬೆದರು ಬೊಂಬೆಯಂತೆ ಬರೀ ವೀಕ್ಷಣೆಗೆ  ಹೊರತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಗೋಜಿಗೆ ಹೋಗುವುದಿಲ್ಲ. ಕೂಡಲೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಇಲ್ಲಿನ ಪಂಚಾಯ್ತಿಗೆ ಶಿಸ್ತು ಕ್ರಮ ಕೈಗೊಂಡು ಸ್ಥಳೀಯ ಗ್ರಾಮಸ್ಥರಿಗಾಗುತ್ತಿರುವ ತೊಂದರೆ ನಿವಾರಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮಸ್ಥರು ದಿನನಿತ್ಯ ಎರಡು ಕಿ.ಮೀ ನಷ್ಟು ದೂರ ಕ್ರಮಿಸಿ ಕುಡಿಯುವ ನೀರು ಹೊತ್ತು ತರುತ್ತಿದ್ದು ಈ ಬಗ್ಗೆ ಇಲ್ಲಿನ ಪಂಚಾಯ್ತಿಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement