ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸಯ್ಯದ್ ಕಾಂಗ್ರೆಸ್ಗೆ
ಕ.ಪ್ರ.ವಾರ್ತೆ , ಹಾಸನ , ಆ. 30
ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಅಧ್ಯಕ್ಷ ಸಯ್ಯದ್ಖಾಸಿಂ ಸಾಬ್ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ. ಶಿವರಾಂ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ. ಆನಂದ್, ಮುಖಂಡ ಎಚ್.ಕೆ. ಜವರೇಗೌಡ, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್, ಪುಟ್ಟಸ್ವಾಮಿ ಮುಂತಾದವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಸಯ್ಯದ್ಖಾಸಿಂ ಸಾಬ್ ಮಾತನಾಡಿ, ಕಾಂಗ್ರೆಸ್ ಹಾಗೂ ಮುಸ್ಲಿಮರ ನಡುವೆ ಬಿಡಿಸಲಾರದ ಬಾಂಧವ್ಯ ಇದೆ. ಈ ಬಂಧನದಲ್ಲಿ ನಾನೊಬ್ಬ ಕೊಂಡಿಯಾಗಲು ಬಂದಿದ್ದೇನೆ. ನಾನು ಕೆಜೆಪಿಯಲ್ಲಿ ಕೆಲಸ ಮಾಡುತ್ತಿದ್ದೆ. ಈ ಪಕ್ಷ ಸಿದ್ದಾಂತವನ್ನು ಗಾಳಿಗೆ ತೂರಿ ಬಿಜೆಪಿಯೊಂದಿಗೆ ಕೈ ಜೋಡಿಸಲು ಮುಂದಾಗಿದೆ. ಇದನ್ನು ವಿರೋಧಿಸಿ ನಾನು ಮತ್ತು ನನ್ನ ಬೆಂಬಲಿಗರು ಕಾಂಗ್ರೆಸ್ ಸೇರಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಪಡಿಸಲು ಶಕ್ತಿಮೀರಿ ಪ್ರಯತ್ನಿಸುತೇವೆ ಎಂದು ನುಡಿದರು. ಪಕ್ಷದ ಮುಖಂಡ ಪರ್ವೀಝ್, ಅಮೀರ್ಖಾನ್ ಇತರರು ಇದ್ದರು.