ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಿನ್ನೀರಿನಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

Vishwanath S
Updated On : 31 Aug 2013, 12:03 pm

ಕ.ಪ್ರ.ವಾರ್ತೆ , ಹಾಸನ , ಆ. 30
ತಾಲೂಕಿನ ಶೆಟ್ಟಿಹಳ್ಳಿ ಸಮೀಪದ ಚೌಡುವಳ್ಳಿ ಬಳಿ ಹೇಮಾವತಿ ಹಿನ್ನೀರಿನಲ್ಲಿ ಮೀನುಗಾರಿಕೆ ನಡೆಸುವ ವೇಳೆ ಮೃತಪಟ್ಟ ಮೂವರು ಮೀನುಗಾರರ ಕುಟುಂಬಗಳಿಗೆ ಸರ್ಕಾರ ತಲಾ 50 ಸಾವಿರ ರು. ಪರಿಹಾರ ನೀಡಿದೆ.  
ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಮೃತರ ಕುಟುಂಬ ವಾರಸುದಾರರಿಗೆ ಪರಿಹಾರದ ಚೆಕ್ ವಿತರಿಸಿದರು. ಈಗ ನೀಡಲಾಗಿರುವ ಮೊತ್ತ ಕಡಿಮೆ ಇದ್ದರೂ ಇದನ್ನು ಮುಂದಿನ ಭವಿಷ್ಯಕ್ಕಾಗಿ ಬ್ಯಾಂಕ್‌ನಲ್ಲಿ ಕಾಯ್ದಿರಿಸಿಕೊಳ್ಳುವಂತೆ ಅವರು ಸಲಹೆ ಮಾಡಿದರು.
ಇದೇ ವೇಳೆ ಮೃತ ಮೀನುಗಾರರ ವಿಧವಾ ಪತ್ನಿಯೊಬ್ಬರು ತಮಗೆ ಯಾವುದಾದರು ಅರೆಕಾಲಿಕ ಉದ್ಯೋಗ ಒದಗಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.
ಹೇಮಾವತಿ ಜಲಾಶಯ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರರಿಗೆ ಜೀವರಕ್ಷಕ ಸಾಧನಗಳು, ಜೀವವಿಮೆ, ಭದ್ರತೆ, ವೇತನ ವ್ಯವಸ್ಥೆ ಜಾರಿ ಮತ್ತಿತರ ವಿಷಯಗಳ ಬಗ್ಗೆ ಮೀನುಗಾರಿಕಾ ಫೆಡರೇಷನ್ ಅನುಸರಿಸುವ ಕ್ರಮವನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.
ತ್ವರಿತ ಪರಿಹಾರ ಒದಗಿಸಲು ಶ್ರಮಿಸಿದ ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ಹಾಗೂ ಸಹಾಯಕ ನಿರ್ದೇಶಕರಾದ ಪ್ರೀತಾ ಎನ್.ಎಸ್. ಅವರ ಪರಿಶ್ರಮ ಅಭಿನಂದನಾರ್ಹ. ಮೀನುಗಾರಿಕಾ ಇಲಾಖೆ ಹಿರಿಯ ಅಧಿಕಾರಿಗಳು ಕೈಗೊಳ್ಳುವ ನಿರ್ಧಾರದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ತಹಸೀಲ್ದಾರ್ ಮಂಜುನಾಥ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement