ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ
ಹಾಸನ: ಜಿಲ್ಲೆಯಲ್ಲಿ ರೈತರ ಕೊಳವೆ ಬಾವಿಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 18,262 ಅರ್ಜಿಗಳು ನೋಂದಣಿಗೊಂಡಿವೆ ಎಂದು ತಿಳಿಸಿದರು. ಈ ಪೈಕಿ 6815 ಕೊಳವೆ ಬಾವಿಗಳಿಗೆ ಮೂಲ ಸೌಕರ್ಯ ಒದಗಿಸಲಾಗಿದ್ದು, 1923 ಸಂಖ್ಯೆ ಟ್ರಾನ್ಸಫಾರ್ಮ್ಗಳನ್ನು ಅಳವಡಿಸಿ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ ಸಕ್ರಮಗೊಂಡ ಕೊಳವೆ ಬಾವಿಗಳಿಗೆ ಮೂಲ ಸೌಕರ್ಯ ಒದಗಿಸುವ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಅವರ ಪ್ರಶ್ನೆಗೆ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದರು.