ನಾಳೆಯಿಂದ ಕೋಡಿಮಠದಲ್ಲಿ ಕಾರ್ತೀಕ ಲಕ್ಷ ದೀಪೋತ್ಸವ
ಅರಸೀಕೆರೆ: ಸುಕ್ಷೇತ್ರ ಕೋಡಿಮಠದಲ್ಲಿ ಡಿ.3ರಂದು ಕಾರ್ತೀಕ ಮಾಸದ ಲಕ್ಷದೀಪೋತ್ಸವ ಹಾಗೂ ಧಾರ್ಮಿಕ ಸಮಾರಂಭ ನಡೆಯಲಿದ್ದು ಸಕಲ ಭಕ್ತರು ಆಗಮಿಸಿ ಶಿವಲಿಂಗಜ್ಜಯ್ಯನವರ ಕೃಪೆಗೆ ಪಾತ್ರರಾಗಬೇಕೆಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸದ ಈ ಲಕ್ಷ ದೀಪೋತ್ಸವವು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದ್ದು, ಈ ಕಾರ್ಯಕ್ರಮದ ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ನಿರಂಜನಾನಂದ ಪುರಿ ಸ್ವಾಮಿ ಸಾನ್ನಿಧ್ಯ ವಹಿಸಲಿದ್ದಾರೆ. ಹಣತೆಗಳನ್ನು ಲೋಕ ಕಲ್ಯಾಣಕ್ಕಾಗಿ ಬೆಳಗಿಸಲಿದ್ದಾರೆ ಎಂದರು.
ಬೂದಿಹಾಳ್ ವಿರಕ್ತ ಮಠದ ನಿರಂಜನ ರಾಜಶೇಖರ ಸ್ವಾಮಿಜಿ, ತಿಪಟೂರು ತಾಲೂಕಿನ ಹೊನ್ನವಳ್ಳಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಚಿಕ್ಕನಾಯ್ಕನಹಳ್ಳಿ ಕಪ್ಪೂರು ಗದ್ದಿಗೆ ಮಠದ ಯತೀಶ ಶಿವಾಚಾರ್ಯ ಸ್ವಾಮೀಜಿ, ಕಡೂರಿನ ಮೂರುಕಳಸದ ಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮಿಜಿ, ಮಾಡಾಳು ವಿರಕ್ತ ಮಠದ ರುದ್ರಮುನಿ ಸ್ವಾಮೀಜಿ, ಕೋಳಗುಂದ ಕೇದಿಗೆ ಮಠದ ಜಯಚಂದ್ರಶೇಖರ ಸ್ವಾಮೀಜಿ, ಕೆ. ಬಿದರೆ ದೊಡ್ಡಮಠದ ಪ್ರಭುಕುಮಾರ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣ್ಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಮಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ ಗುರೂಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ವಿವರಿಸಿದರು.