ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪುರಸಭೆ; 99.02 ಲಕ್ಷ ಉಳಿತಾಯ ಬಜೆಟ್

Rashmi Kasaragodu
Updated On : 1 Dec 2013, 11:58 am

ಸಕಲೇಶಪುರ: ಪುರಸಭೆಯ 2013-14ನೇ ಸಾಲಿನ ಬಜೆಟ್ ಸಭೆಯಲ್ಲಿ 99.02 ಲಕ್ಷ ಉಳಿತಾಯ ಬಜೆಟ್ ಅನ್ನು ಶನಿವಾರ  ಮಂಡಿಸಲಾಯಿತು.
ಪುರಸಭೆ ಅಧ್ಯಕ್ಷ ಎಸ್.ಎನ್. ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಮೂಲಗಳಿಂದ 18.28 ಲಕ್ಷ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, 17.29 ಲಕ್ಷ ವೆಚ್ಚ ಮಾಡಲು ನಿರ್ಧರಿಸಲಾಗಿದೆ.
ಬಜೆಟ್ ಸಭೆಯನ್ನು ಬೆಳಗ್ಗೆ 11 ಗಂಟೆಗೆ ಕರೆಯಲಾಗಿತ್ತಾದರೂ ಸದಸ್ಯರ ಗೈರು ಹಾಜರಿಯಿಂದಾಗಿ ಸಭೆ 11.45ಕ್ಕೆ ಪ್ರಾರಂಭವಾಗಿ ಯಾವುದೇ ಚರ್ಚೆ ಇಲ್ಲದೆ ಕೇವಲ 15 ನಿಮಿಷಗಳಲ್ಲಿ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
ಅಂತಿಮವಾಗಿ ಪಟ್ಟಣದ ಹಳೇ ತಾಲೂಕು ಕಚೇರಿ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ನೆಲಸಮಗೊಳಿಸಿ ಸಾರ್ವಜನಿಕ ಉಪಯೋಗಕ್ಕಾಗಿ ಪುರಸಭೆಗೆ ನೀಡುವಂತೆ ಮನವಿ ಮಾಡುವ ಪತ್ರವನ್ನು ಜಿಲ್ಲಾಧಿಕಾರಿಗೆ ಬರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಮುಖೇಶ್, ಮುಖ್ಯಾಧಿಕಾರಿ ವೀರಭದ್ರಯ್ಯ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement