ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪೊಲೀಸರು, ವಕೀಲರು ಸಹಕರಿಸಬೇಕು: ನ್ಯಾ ಸರಸ್ವತಿ

Rashmi Kasaragodu
Updated On : 1 Nov 2013, 11:26 am

ಕ.ಪ್ರ.ವಾರ್ತೆ    ಅರಸೀಕೆರೆ    ನ.1
ಜನತಾ ನ್ಯಾಯಾಲಯದಲ್ಲಿ ರಾಜಿ ಮಾಡಬಹುದಾದ ಸಿವಿಲ್ ಹಾಗೂ ಕೆಲವು ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಸ್ಥಳೀಯ ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘ ಹೆಚ್ಚಿನ ಸಹಕಾರ ನೀಡಬೇಕೆಂದು ಪಟ್ಟಣದ ಜೆಎಂಎಫ್ಸಿ ಹಿರಿಯ ನ್ಯಾಯಾಧೀಶೆ ಸರಸ್ವತಿ ವಿ. ಕೋಸಂದರ್ ಮನವಿ ಮಾಡಿದರು.
ತಾಲೂಕು ಕಾನೂನು ಸೇವಾ  ಸಮಿತಿ ಮತ್ತು ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ  ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ತಾಲೂಕು ಕಾನೂನು ಸೇವಾ ಸಮಿತಿಯ ನೇತೃತ್ವದಲ್ಲಿ ತಾಲೂಕಿನ ನಾನಾ ಸರ್ಕಾರಿ ಇಲಾಖೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಲ್ಲಿ ತಾಲೂಕಿನಲ್ಲಿ ಈಗಾಗಲೇ ನಡೆಸಿರುವ ಅನೇಕ ಕಾನೂನು ಅರಿವು ಕಾರ್ಯಕ್ರಮಗಳು ಅತ್ಯಂತ ಫಲಪ್ರದವಾದ ಕಾರಣ ಗ್ರಾಮೀಣ ಜನರಲ್ಲಿ ಸಾಮಾನ್ಯ ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಉಂಟಾಗಿದೆ ಎಂದು ನುಡಿದರು.
ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಜನತೆ ಪರಸ್ಪರ ರಾಜಿ ಸಂಧಾನದ ಮೂಲಕ ಜನತಾ ನ್ಯಾಯಾಲಯದ ಮುಂದೆ ಬಂದು ಅನೇಕ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಹೆಚ್ಚಿನ ಆಸಕ್ತಿಯನ್ನು ವಹಿಸುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ದೇವಾನಂದ ಮಾತನಾಡಿ, ಸಾರ್ವಜನಿಕರಿಗೆ ಸಾಮಾನ್ಯ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸೆ.23 ರಿಂದ ನ್ಯಾಯಾಲಯ ಆವರಣದಲ್ಲಿ ಪ್ರತಿದಿನ ಜನತಾ ನ್ಯಾಯಾಲಯದ ಕಲಾಪಗಳನ್ನು ನಡೆಸಲಾಗುತ್ತಿದ್ದು, ಬಹುತೇಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು, ನ.23 ರವರೆಗೂ ಜನತಾ ನ್ಯಾಯಾಲಯದ ಕಲಾಪಗಳು ನಡೆಯುತ್ತವೆ ಎಂದು ತಿಳಿಸಿದರು.
ಅಪರ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಚನ್ನಪ್ಪ ಕುರುಬೆಟ್, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಸರ್ವೇಶ್, ಗ್ರಾಮಾಂತರ ಠಾಣೆ ಆರಕ್ಷಕ ನಿರೀಕ್ಷಕ ಗಂಗಾಧರಪ್ಪ, ನಗರ ಠಾಣೆ ಆರಕ್ಷಕ ನಿರೀಕ್ಷಕ ನಂದಕುಮಾರ್ ಇನ್ನಿತರ ಪೊಲೀಸ್ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement