ಪ್ರವಾಸಿ ಟ್ಯಾಕ್ಸಿ; ಫಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಟ
ಹಾಸನ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಹಾಸನ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ 2012-13ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿಯಲ್ಲಿ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಸಹಾಯಧನಕ್ಕೆ ನಾನಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯಿಂದ ಅಭ್ಯರ್ಥಿಗಳ ವಯೋವುತಿ ಜೇಷ್ಠತೆಯ ಆಧಾರದ ಮೇಲೆ 24 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ಅರ್ಹ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಢಿಢಿಢಿ.ಛಡಡಛಟಿ.ಟ್ಝ್ಛಿ.್ಝಟಿನಲ್ಲಿ ಪ್ರಕಟಿಸಲಾಗಿದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಪ್ರವಾಸೋದ್ಯಮ ಇಲಾಖೆ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಸಹಾಯಕ ನಿರ್ದೇಶಕರು, ಪ್ರಾದೇಶಿಕ ಪ್ರವಾಸಿ ಕಚೇರಿ, ಹಾಸನ ತಿಳಿಸಿದ್ದಾರೆ.