ರಾಜ್ಯೋತ್ಸವ ಸಮಾರಂಭ
ಹೊಳೆನರಸೀಪುರ: ಕರ್ನಾಟಕದಲ್ಲಿ ಕನ್ನಡ ಭಾಷೆಗೆ ದೊರಕಬೇಕಾದ ಸ್ಥಾನಮಾನಗಳು ದೊರೆತಿರುವುದರಿಂದಲೇ 8 ಜ್ಞಾನಪೀಠ ಪ್ರಶಸ್ತಿಗಳು ಬರಲು ಸಾಧ್ಯವಾಯಿತು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ರಾಮೇಗೌಡ ತಿಳಿಸಿದರು. ಪಟ್ಟಣದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಲಲಿತಾಬಾಯಿ ಮಾತನಾಡಿ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದ್ದು, ಕನ್ನಡ ನಾಡಿನಲ್ಲಿ ವಾಸ ಮಾಡುವ ಪ್ರತಿಯೊಬ್ಬ ಕನ್ನಡಿಗನೂ ಸಹ ಮಾತೃಭಾಷೆ ಕನ್ನಡಕ್ಕೆ ಮೊದಲ ಸ್ಥಾನ ನೀಡುವಂತೆ ಕೋರಿದರು. ಸಹಾಯಕ ಪ್ರಾಧ್ಯಾಪಕ ಕುದುರಿಹಾಳ್ ನಿಂಗಪ್ಪ ಮಾತನಾಡಿ, ಕನ್ನಡ ನಾಡಿನ ಅನೇಕ ದಿಗ್ಗಜ ಸಾಹಿತಿಗಳ ಕೊಡುಗೆ ನೀಡಿರುವುದನ್ನು ಸ್ಮರಿಸಿ, ಕನ್ನಡದ ಎಂಟು ಮಂದಿ ದಿಗ್ಗಜರಿಗೆ ದೊರೆತಿರುವ ಜ್ಞಾನಪೀಠದ ಜತೆಗೆ ಒಂಬತ್ತನೇ ಜ್ಞಾನಪೀಠ ದೊರಕುವಂತಾಗಬೇಕು ಎಂದು ತಿಳಿಸಿದರು.ವಿದ್ಯಾರ್ಥಿನಿ ಸುಪ್ರೀತಿ ಮತ್ತು ಶೃತಿ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಮಂಜುನಾಥ್ ಸ್ವಾಗತಿಸಿದರು.