ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ಹಾಸನ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟಿಸುವಂತೆ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಬಿ. ಶಿವರಾಂ ಕರೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದೆ ನಡೆಯಲಿರುವ ಲೋಕಸಭೆ ಚುನಾವಣೆಯು ಸಮೀಪದಲ್ಲಿದ್ದು, ಪಕ್ಷದ ಪ್ರತಿ ಕಾರ್ಯಕರ್ತರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಪಕ್ಷ ಸಂಘಟನೆಗೆ ಹಗಲಿರುಳೆನ್ನದೆ ಕಾರ್ಯಕರ್ತರು ಶ್ರಮಿಸಿದ್ದಾಗ ಮಾತ್ರ ಫಲ ಸಿಗಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಶ್ರಮಿಸಬೇಕು ಎಂದರು. ಉಪಾಧ್ಯಕ್ಷ ನಾರಾಯಣಗೌಡ, ಡಿ. ಮಲ್ಲೇಶ್, ಕಬ್ಬಳ್ಳಿ ರಂಗೇಗೌಡ, ಲಲಿತಮ್ಮ, ಮುನಿಸ್ವಾಮಿ ಇದ್ದರು.