ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಪ್ರತಿಭೆ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ'

Rashmi Kasaragodu
Updated On : 2 Dec 2013, 11:13 am

ಸಕಲೇಶಪುರ: ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಆದ್ಯ ಕರ್ತವ್ಯ ಎಂದು ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ಪ್ರಾಂತೀಯ ಮುಖ್ಯಸ್ಥ ಮೆಟಿಲ್ಡಾ ಮೆಂತೆರೊ ಹೇಳಿದ್ದಾರೆ.
ಪಟ್ಟಣದ ಸಂತ ಜೋಸೆಫರ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸೃಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯ ಅಂತರ್ಯದಲ್ಲಿ ಒಂದೊಂದು ವಿಧವಾದ  ಪ್ರತಿಭೆಗಳು ಹುದುಗಿದ್ದು ಈ ಪ್ರತಿಭೆಯನ್ನು ಅನಾವರಣಗೊಳಿಸುವಂತ ವೇದಿಕೆಯನ್ನು ಸೃಷ್ಟಿಸುವ ಮೂಲಕ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಈ ಶಾಲೆ ಹಮ್ಮಿಕೊಂಡಿರುವ ಸೃಜನೋತ್ಸವದಂತಹ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಮಾತನಾಡಿ, ಶಿಕ್ಷಣ ಕೇವಲ ಅಧ್ಯಯನ ವಿಷಯವಲ್ಲ. ಅದು ಶರೀರ ಹಾಗೂ ಮನಸ್ಸಿಗೆ ಸಂಬಂಧಪಟ್ಟಿದ್ದು. ಆದ್ದರಿಂದ ಈ ನಿಟ್ಟಿನಲ್ಲಿ ಶಿಕ್ಷಕರು ಶಿಕ್ಷಣ ನೀಡಬೇಕಾಗಿದ್ದು ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರತಗೆಯಲು ಶ್ರಮಿಸಬೇಕು ಎಂದರು.ವಕೀಲರ ಸಂಘದ ಅಧ್ಯಕ್ಷ ಆರ್.ಎನ್. ಕೃಷ್ಣಮೂರ್ತಿ ಮಾತನಾಡಿದರು. ಸಿಸ್ಟರ್ ಆಫ್ ಚಾರಿಟಿ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಗ್ರೇಸ್ ಜೋಸೆಫ್, ಧರ್ಮಗುರು ವಿನ್ಸೆಂಟ್ ಡಿಸೋಜಾ, ಮುಖ್ಯ ಶಿಕ್ಷಕಿ ವಿಲ್ಮಾ ಪಿಂಟೋ, ಸಂಚಾಲಕಿ ಲುಸಿಪೆರೇರಾ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement