ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಮಸ್ಯೆಗೆ ಸ್ಪಂದಿಸದಿದ್ದರೆ ಉಸ್ತುವಾರಿ ತ್ಯಜಿಸಿ

Rashmi Kasaragodu
Updated On : 2 Dec 2013, 11:13 am

ಕ.ಪ್ರ.ವಾರ್ತೆ    ಹಾಸನ    ಡಿ.2
ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೊಮ್ಮೆ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ಜ್ವಲಂತ ಸಮಸ್ಯೆಗೆ ಸ್ಪಂದಿಸದಿದ್ದರೆ ತಮ್ಮ ಉಸ್ತುವಾರಿ ಸ್ಥಾನವನ್ನು ಬಿಟ್ಟುಕೊಡಬೇಕು. ಇಲ್ಲವಾದಲ್ಲಿ ಜಿಲ್ಲೆಯಿಂದ ನಿಯೋಗ ತೆರಳಿ ಸಚಿವರನ್ನು ಬದಲಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸುವುದಾಗಿ ಕೆಪಿಸಿಸಿ ಸದಸ್ಯ ವಿನಯ್ ಗಾಂಧಿ ಹೇಳುವ ಮೂಲಕ ತಮ್ಮ ಪಕ್ಷದ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪನವರು ತಿಂಗಳಿಗೊಮ್ಮೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನಿರ್ವಹಿಸುವುದಾಗಿ ಭರವಸೆ ನೀಡಿದ್ದರು.
 ಉಸ್ತುವಾರಿ ಸಚಿವರಿಗೆ ಕೊಡಗು ಮತ್ತು ಹಾಸನ ಜಿಲ್ಲೆಗಳ ಉಸ್ತವಾರಿ ನೀಡಿರುವುದರಿಂದ ಅವರಿಗೆ ಒತ್ತಡ ಹೆಚ್ಚಾಗಿದೆ. ಇದರಿಂದ ಜಿಲ್ಲೆಗೆ ಸರಿಯಾಗಿ ಆಗಮಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ಜಿಲ್ಲೆಯಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಚಿವರು ಸೂಚನೆ ನೀಡಬೇಕು. ಸಾಕಷ್ಟು ಕೆಲಸ ಕಾರ್ಯಗಳಿಗೆ ಪ್ರತಿಪಕ್ಷದ ನಾಯಕರು ಅಡಚಣೆ ಉಂಟು ಮಾಡುತ್ತಿದ್ದಾರೆ. ಸಚಿವರು ಸರಿಯಾದ ತಿಂಗಳಿಗೊಮ್ಮೆ ಬಂದರೆ ಅಂದ ಅಡಚಣೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಆದ್ದರಿಂದ ಸಚಿವರು ತಿಂಗಳಿಗೊಮ್ಮೆ ಜಿಲ್ಲೆಗೆ ಆಗಮಿಸಿ ಜ್ವಲಂತ ಸಮಸ್ಯೆಗಳನ್ನು ಆಲಿಸಬೇಕು ಎಂದು ಒತ್ತಾಯಿಸಿದರು.
ಅಧಿಕಾರಿಗಳ ಎತ್ತಂಗಡಿ: ಈ ರೀತಿ ಹೇಳಿಕೆ ನೀಡುವ ಮೂಲಕ ಶಾಂತಿ ಭಂಗ ಉಂಟು ಮಾಡುವ ಮೂಲಕ ಜವಾಬ್ದಾರಿಯುತ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತೆ ಮಾಡಿದ್ದಾರೆ ಎಂದು ಹೇಳಿದ ವಿನಯ್ ಸಿಂಗ್, ಅಧಿಕಾರಿಗಳ ವಾಹನಕ್ಕೆ ಬೆಂಕಿ ಹಚ್ಚುವಂತೆ ಪ್ರಚೋದನೆ ನೀಡುವ ರೇವಣ್ಣ ಅವರು ಇನ್ನೂ ಸಾಮಾನ್ಯ ಜನರ ಮೇಲೆ ದಬ್ಬಾಳಿಕೆಯನ್ನು ಮಾಡುತ್ತಾರೆ.
ಈಗಾಗಲೇ ದಕ್ಷ ಅಧಿಕಾರಿಗಳು ಜಿಲ್ಲೆಗೆ ಬಂದರೆ ಅಂತಹ ಅಧಿಕಾರಿಗಳಿಗೆ ಧಮುಕಿ ಹಾಕಿ ಅವರು ಇಲ್ಲಿಂದ ವರ್ಗಾವಣೆ ಆಗುವಂತೆ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಅಧಿಕಾರಿಗಳನ್ನು ಇಲ್ಲಿಂದ ಎತ್ತಂಗಡಿ ಮಾಡಿದ್ದಾರೆ ಎಂದು ದೂರಿದರು.
ಜೊತೆಗೆ ಹೊಳೆನರಸೀಪುರದಲ್ಲಿ ಇತ್ತೀಚೆಗೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಜೆಸಿಬಿ ಯಂತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದ ಸಂದರ್ಭದಲ್ಲಿ ಎಚ್.ಡಿ. ರೇವಣ್ಣ ಅವರು ಜೆಸಿಬಿ ಯಂತ್ರವನ್ನು ಬಿಡಬೇಕು.
 ಇಲ್ಲವಾದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಧಮುಕಿ ಹಾಕಿದ್ದಾರೆ.
ಈ ರೀತಿಯಾಗಿ ಹಲವು ಅಕ್ರಮ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಕೊಂಡಂತಹ ಪರ ವಕಾಲತ್ತು ವಹಿಸಿ ಅಧಿಕಾರಿಗಳು ಬೆದರಿಕೆಯನ್ನು ಹಾಕಿದ್ದಾರೆ. ರೇವಣ್ಣ ಅವರ ಅಟ್ಟಹಾಸ ಇದೇ ರೀತಿ ಜಿಲ್ಲೆಯಲ್ಲಿ ಮುಂದುವರೆದರೆ ಈ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
 ಈ ಸಂದರ್ಭದಲ್ಲಿ ಮುಖಂಡರಾದ ರಮೇಶ್, ಬಾಬು, ನಿರಂಜನ್ ಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement