ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಂಗವಿಕಲರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು

Rashmi Kasaragodu
Updated On : 4 Dec 2013, 12:37 pm

ಕ.ಪ್ರ.ವಾರ್ತೆ   ಬೇಲೂರು   ಡಿ.3
ಯಾವುದೇ ಪರಿಸ್ಥಿತಿಯಲ್ಲೂ ಅಂಗವಿಕಲರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಡಿ.ಬಿ. ಚಂದ್ರೇಗೌಡ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ವತಿಯಿಂದ ಪಟ್ಟಣದ ಸರ್ಕಾರಿ ಹಿರಿಯ ಬಾಲಕರ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ   ಮಂಗಳವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ  ಅವರು ಮಾತನಾಡಿದರು.
ಅಂಗವೈಕಲ್ಯವಿದೆ ಎಂಬ ಮನೋಭಾವನೆಯನ್ನು ತೊರೆದು ಎಲ್ಲರಂತೆ ತಾವೂ ಇದ್ದೇವೆ ಎಂಬುದನ್ನು ತೋರ್ಪಡಿಸಬೇಕು. ವಿಕಲಚೇತನ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸರ್ಕಾರ ಹಲವಾರು ಸೌಲಭ್ಯವನ್ನು ನೀಡಿದೆ. ಆದರೆ ಅವುಗಳನ್ನು ಸಮರ್ಪಕವಾಗಿ ಬಳಸುವಲ್ಲಿ ಅಂಗವಿಕಲ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದಾರೆ. ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಬಿ. ಸುಂದ್ರೇಶ್ ಮಾತನಾಡಿ, ತಾಲೂಕಿನಲ್ಲಿ ಒಟ್ಟು 306 ವಿಕಲಚೇತನ ಮಕ್ಕಳನ್ನು ಗುರುತಿಸಲಾಗಿದ್ದು ಆ ಮಕ್ಕಳಿಗೆ ವೈದ್ಯಕೀಯ, ಶೈಕ್ಷಣಿಕ ಸೌಲಭ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ತಲುಪಿಸಲಾಗುತ್ತಿದೆ. ಅನುವಂಶಿಯತೆ, ಸಾಮಾಜಿಕ ಹಾಗೂ ಶೈಕ್ಷಣಿಕ ಕೊರತೆಯಿಂದ ಕೆಲವು ಅಂಗವೈಫಲ್ಯತೆಗ ಒಳಗಾಗಿರುತ್ತಾರೆ ಎಂದರು.
ವಿಕಲ ಚೇತನ ಮಕ್ಕಳಲ್ಲಿ ಮರಳಿ ಚೈತನ್ಯವನ್ನು ತುಂಬಲು, ವಿಕಲ ಚೇತನ ಮಕ್ಕಳಲ್ಲಿ ಅಸಮಾನ್ಯ ಸಾಧನೆ ಮಾಡುವಂತೆ ಪ್ರೇರೇಪಿಸಲು ಸರ್ವಶಿಕ್ಷಾ ಅಭಿಯಾನದಡಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಪ್ರಮುಖವಾಗಿ ವಿಕಲಚೇತನ ಮಕ್ಕಳು ಕಲಿಕೆಯಲ್ಲಿ ಪ್ರಗತಿ ತೋರಲು ಕಡ್ಡಾಯ ಶಿಕ್ಷಣ ಮಸೂದೆಯಡಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಈ ಸಂದರ್ಭ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಟಿ. ಇಂದಿರಾ ಧರ್ಮಪ್ಪ, ಜಯಶೀಲ  ಜಯಶಂಕರ್, ಸಮನ್ವಯ ಅಧಿಕಾರಿ ನಾರಾಯಣ್, ತಾ.ಪಂ ಉಪಾಧ್ಯಕ್ಷೆ ಕಮಲಮ್ಮ, ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement