ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಲೆನಾಡು ಕ್ರೀಡಾಕೂಟಕ್ಕೆ ಚಾಲನೆ

Rashmi Kasaragodu
Updated On : 4 Dec 2013, 12:39 pm

ಹಾಸನ: ಶ್ರೀ ಆದಿಚುಂಚನಗಿರಿ ಹಾಸನ ಶಾಖಾಮಠದ ವತಿಯಿಂದ ಮಂಗಳವಾರ ಮಲೆನಾಡು ವಲಯ ಮಟ್ಟದ ಕ್ರೀಡಾಕೂಟ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಮಲೆನಾಡು ವಲಯ ಮಟ್ಟದ ಕ್ರೀಡಾಕೂಟವನ್ನು ಆದಿಚುಂಚನಗಿರಿ ಶಾಖಾಮಠದ ಶ್ರೀಶಂಭುನಾಥ ಸ್ವಾಮೀಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಆಶಯದಂತೆ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ಸ್ಪರ್ಧೆಗಳಲ್ಲಿ ಸೋಲು- ಗೆಲುವು ನಿಶ್ಚಿತವಾದದ್ದು. ಎರಡನ್ನೂ ಸಮನಾಗಿ ತೆಗೆದುಕೊಂಡು ಮುನ್ನಡೆಯಬೇಕು. ಇಂತಹ ಕ್ರೀಡಾ ಕೂಟಗಳು ಅನೇಕ ಕ್ರೀಡಾಪಟುಗಳಿಗೆ ವೇದಿಕೆಯಾಗಿದ್ದು, ಇಲ್ಲಿ ಗೆದ್ದಂತಹ ವಿದ್ಯಾರ್ಥಿಗಳು ಹಂತ ಹಂತವಾಗಿ ಬೆಳೆದು ಉತ್ತಮ ಕ್ರೀಡಾಪಟುಗಳಾಗಬಹುದು ಎಂದರು.
ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಉತ್ತರಕನ್ನಡ, ಹಾಸನ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶೃಂಗೇರಿ ಆದಿಚುಂಚನಗಿರಿ ಶಾಖಾಮಠದ ಶ್ರೀ ಗುಣನಾಥಸ್ವಾಮೀಜಿ, ಮಂಗಳೂರು ಆದಿಚುಂಚನಗಿರಿ ಮಹಸಂಸ್ಥಾನಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಕ್ಷೇತ್ರ ಕಬ್ಬಳಿಯ ಶಿವಪುತ್ರನಾಥ ಸ್ವಾಮೀಜಿ, ಕಸಾಪ ಮಾಜಿ ಅಧ್ಯಕ್ಷ ಎಚ್.ಬಿ.ಮದನಗೌಡ, ನಗರಸಭೆ ಸದಸ್ಯ ಎಚ್.ಎಸ್. ಅನಿಲ್ ಕುಮಾರ್, ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ್, ಜಿಲ್ಲಾ ದೈಹಿಕ ಶಿಕ್ಷಕ ಅಧೀಕ್ಷಕ ಈಶ್ವರಪ್ಪ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement