ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

8 ರಂದು ಜಿಲ್ಲಾ ಸರ್ಕಾರಿ ಅಂಗವಿಕಲ ನೌಕರರ ಪ್ರಥಮ ಸಮ್ಮೇಳನ

Rashmi Kasaragodu
Updated On : 5 Dec 2013, 12:57 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಡಿ. 4
ಬೆಂಗಳೂರಿನಲ್ಲಿ ನಡೆಯುವ ಬೆಳ್ಳಿಹಬ್ಬದ ಅಂಗವಾಗಿ ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಜಿಲ್ಲಾ ಸರ್ಕಾರಿ ಅಂಗವಿಕಲ ನೌಕರರ ಪ್ರಥಮ ಸಮ್ಮೇಳ ಡಿ.8ರಂದು ನಡೆಸುವುದಾಗಿ ಸಂಘ ಜಿಲ್ಲಾಧ್ಯಕ್ಷ ಎಸ್.ಜೆ.ರಾಮಕೃಷ್ಣಯ್ಯ ತಿಳಿಸಿದರು.
 ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಸೇವಕ ಹಾಗೂ ವೈದ್ಯ ಡಾ.ಗುರುರಾಜ್ ಹೆಬ್ಬಾರ್ ಉಪಸ್ಥಿತರಿದ್ದು, ಶಾಸಕ ಎಚ್.ಎಸ್.ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸುವರು ಎಂದರು. ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಿ.ಎನ್.ಬಾಲಕೃಷ್ಣ ಸಾಧಕರನ್ನು ಸನ್ಮಾನಿಸಲಿದ್ದಾರೆ. ವಿಕಲ ಚೇತನ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತಿ ಅಂಗವಿಕಲ ನೌಕರರನ್ನು ಎಸ್ಪಿ ರವಿ ಡಿ.ಚನ್ನಣ್ಣನವರ್ ಸನ್ಮಾನಿಸುವರು.
 ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಕೆ.ಕುಮಾರಸ್ವಾಮಿ, ವೈ.ಎನ್.ರುದ್ರೇಶ್ಗೌಡ, ಎ.ಮಂಜು,  ಪಟೇಲ್ ಶಿವರಾಂ, ಜಿಪಂ ಅಧ್ಯಕ್ಷೆ ಅಂಬಿಕ ರಾಮಣ್ಣ, ನಗರಸಭೆ ಅಧ್ಯಕ್ಷೆ ವಿದ್ಯಾಶ್ರೀ, ಜಿಲ್ಲಾಧಿಕಾರಿ ಅನ್ಬುಕುಮಾರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪಸಿಂಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement