ಇಂದು ಉಚಿತ ರಕ್ತದಾನ ಶಿಬಿರ
ಬೇಲೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ 57ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಬೇಲೂರು ತಾಲ್ಲೂಕು ಘಟಕದ ವತಿಯಿಂದ ಡಿ. 6ರಂದು ಬೆಳಗ್ಗೆ 10.30ಕ್ಕೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿರುವ ಟಿಎಪಿಸಿಎಂಎಸ್ ಆವರಣದಲ್ಲಿ ಉಚಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವುದರ ಮೂಲಕ ಮತ್ತೊಂದು ಜೀವ ಉಳಿಸುವುದಕ್ಕೆ ಕಾರಣರಾಗಬೇಕೆಂದು ತಾಲ್ಲೂಕು ಸಮಿತಿಯು ಮನವಿ ಮಾಡುತ್ತದೆ ಎಂದು ತಾಲೂಕು ಪ್ರಧಾನ ಸಂಚಾಲಕ ಬಿ.ಎಲ್. ಲಕ್ಷ್ಮಣ್ ತಿಳಿಸಿದ್ದಾರೆ.