ಸುವರ್ಣ ಮಹೋತ್ಸವ
ಚನ್ನರಾಯಪಟ್ಟಣ: ಚನ್ನರಾಯಪಟ್ಟಣದ ನವೋದಯ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಳೆದ 50 ವರ್ಷಗಳ ಹಿಂದೆ ಸ್ಥಾಪಿತವಾಗಿರುವ ದೊಡ್ಡಕುಂಚೆ ಗ್ರಾಮದ ನವೋದಯ ವಿದ್ಯಾ ಸಂಸ್ಥೆಯ ಶಾಖೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.21ಹಾಗೂ 22ರಂದು ನಡೆಯಲಿದೆ ಎಂದು ನವೋದಯ ವಿದ್ಯಾ ಸಂಸ್ಥೆ ಅಧ್ಯಕ್ಷ ಜೆ.ಎಸ್. ಜಯರಾಂ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಉಧ್ಘಾಟಿಸಲಿದ್ದು, ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮಾನೆ ರತ್ನಾಕರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಶಾಸಕ ಎಚ್.ಡಿ ರೇವಣ್ಣ ಅವರು ಅಕ್ಷರ ದಾಸೋಹ ಕೊಠಡಿ ಉಧ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
22ರಂದು ಮುಂಜಾನೆ ಗೋಷ್ಠಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಚಾಲನೆ ನೀಡಲಿದ್ದು, ಸಂಸ್ಥೆಯನ್ನು ಸ್ಥಾಪಿಸಲು ಶ್ರಮಿಸಿದ ಎ.ಜಿ. ರಾಮಚಂದ್ರರಾವು ಕುಟುಂಬಕ್ಕೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಸಾಹಿತಿ ಮಳಲಿ ವಸಂತ ಕುಮಾರ್, ನಿಕಟಪೂರ್ವ ಕಸಾಪ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ತುಮಕೂರಿನ ರಾಮಕೃಷ್ಣ ಮಠದ ವೀರೇಶಾನಂದ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಠಾದೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ನವೀನ್, ನಿಕಟಪೂರ್ವ ಅಧ್ಯಕ್ಷ ಪಟೇಲ್ ಮಂಜುನಾಥ್, ನಿರ್ದೇಶಕ ಆದಿಶೇಷಕುಮಾರ್ ಇದ್ದರು.