ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್ ಭವನದಲ್ಲೂಮಾನವತಾವಾದಿಗೆ ನಮನ

Rashmi Kasaragodu
Updated On : 7 Dec 2013, 12:06 pm

ಕ.ಪ್ರ.ವಾರ್ತೆ  ಹಾಸನ  ಡಿ 6
ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಹಣ ದಿನಾಚರಣೆಯನ್ನು ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಚರಿಸಲಾಯಿತು. ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಡಿ. ಮಲ್ಲೇಶ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಪೂಜೆಯನ್ನು ಸಲ್ಲಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ರಚಿಸಿದ ಸಂವಿಧಾನದ ಬಗ್ಗೆ ವಿವರಿಸಲಾಯಿತು. ಅವರ ಆದರ್ಶ ಗುಣ, ತತ್ವಗಳನ್ನು ಮೈಗೂಡಿಸಿಕೊಂಡು ನಾವೆಲ್ಲರೂ ಒಟ್ಟಾಗಿ ದೇಶಕ್ಕಾಗಿ ದುಡಿಯೋಣ ಎಂಬ ಪ್ರತಿಜ್ಞೆ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಗೌಡ, ನಿಂಗೇಗೌಡ, ಮಂಜುನಾಥ್, ವೆಂಕಟೇಶ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement