ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಮಗಾರಿ ಮುಗಿದು ವರ್ಷವಾದರೂ ಉದ್ಘಾಟನೆ ಇಲ್ಲ!

Rashmi Kasaragodu
Updated On : 7 Dec 2013, 12:06 pm

ಕ.ಪ್ರ.ವಾರ್ತೆ  ಅರಸೀಕೆರೆ  ಡಿ.6
ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಶೌಚಾಲಯಗಳು ಕಾಮಗಾರಿ ಪೂರ್ಣಗೊಂಡು ಒಂದು ವರ್ಷವೇ ಕಳೆದರೂ ಈವರೆಗೆ ಉದ್ಘಾಟನೆಯ ಭಾಗ್ಯ ದೊರೆಯದೆ ಪುರಸಭೆಯ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ.
ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿ  ನಿರ್ಮಾಣ ಮಾಡಿರುವ ಶೌಚಾಲಯ ಈವರೆಗೆ ಉದ್ಘಾಟನೆಯಾಗದ ಕಾರಣ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆಯಲ್ಲದೆ ಇದರಿಂದ ರಸ್ತೆಬದಿಯಲ್ಲಿ ಮಲಮೂತ್ರ ವಿಸರ್ಜಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಇದರಿಂದ ರಸ್ತೆಯಲ್ಲಿ ಓಡಾಡುವವರಿಗೆ ಅಸಹ್ಯಕರವಾದ ವಾತಾವರಣವನ್ನು ಸೃಷ್ಟಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಜೆ.ಸಿ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ,  ಸಿಬ್ಬಂದಿಗೆ, ರಸ್ತೆ ಬದಿಯಲ್ಲಿರುವ ಗೂಡು ಅಂಗಡಿಯವರ ಅನುಕೂಲಕ್ಕೆಂದು ನಿರ್ಮಿಸಲಾಗಿದ್ದ  ಸಾರ್ವಜನಿಕ ಸುಲಭ ಶೌಚಾಲಯ ನಿರ್ಮಾಣಗೊಂಡು ಒಂದು ವರ್ಷಕ್ಕೂ ಹೆಚ್ಚು ಕಳೆದರೂ  ಉದ್ಘಾಟನಾ ಭಾಗ್ಯವಿಲ್ಲದೆ ಜನರು ರಸ್ತೆ ಬದಿಯಲ್ಲಿಯೇ ಮಲಮೂತ್ರ ವಿಸರ್ಜಿಸುವ ಸ್ಥಿತಿ ನಿರ್ಮಾಣಗೊಂಡಿದೆ.
ಪಟ್ಟಣದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ  ನೂತನವಾಗಿ ನಿರ್ಮಾಣಗೊಂಡಿರುವ ಶೌಚಾಲಯ ಎಲ್ಲಾ ರೀತಿಯಿಂದಲೂ ಅನುಕೂಲವಾಗಿದೆ. ಇಲ್ಲದಿದ್ದರೆ ಜನರು ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ತೆರಳಿ ನಿತ್ಯಕರ್ಮ ಮುಗಿಸಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಸಂಬಂಧಿಸಿದವರು ಕೂಡಲೇ ಶೌಚಾಲಯ ಉದ್ಘಾಟನೆಗೆ ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ  ಸತ್ಯನಾರಾಯಣ ಅವರನ್ನು ಪ್ರಶ್ನಿಸಿದಾಗ  ಶೌಚಾಲಯಕ್ಕೆ ವಿದ್ಯುತ್ ಹಾಗೂ ನೀರಿನ  ಸೌಲಭ್ಯ ಕಲ್ಪಿಸಬೇಕಿದ್ದು ಶೀಘ್ರ ಉದ್ಘಾಟನೆಗೆ ಅನುವು ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement