ಬೆಂಬಲ ಬೆಲೆಯಲ್ಲಿಮೆಕ್ಕೆಜೋಳ ಖರೀದಿ ಎಲ್ಲೆಲ್ಲಿ?
ಹಾಸನ: ಹಾಸನ ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಹಾಗೂ ಟಿ.ಎ.ಪಿ.ಸಿ.ಎಂ.ಎಸ್. ಸಹಯೋಗದೊಂದಿಗೆ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆ ಜೋಳ ಖರೀದಿ ಕೇಂದ್ರವನ್ನು ಈಗಾಗಲೇ ತೆರೆಯಲಾಗಿದ್ದು, ಹಾಸನ ಮತ್ತು ಆಲೂರು ತಾಲ್ಲೂಕಿನ ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ಕೋರಿದ್ದಾರೆ.
ಎಲ್ಲೆಲ್ಲಿ ಖರೀದಿ ?: ಅರಸೀಕರೆ ಕೃಷಿ ಮಾರುಕಟ್ಟೆ ಸಮಿತಿಯ ಗಂಡಸಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸೋಮವಾರ, ಮಂಗಳವಾರ, ಬುಧವಾರಗಳಂದು ಹಾಗೂ ಜಾವಗಲ್ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಗುರುವಾರ, ಶುಕ್ರವಾರ, ಶನಿವಾರಗಳಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಹಾಸನ ಇವರ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ 1310 ರು.ನಂತೆ ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.