ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೈಕ್ ಡಿಕ್ಕಿ: ಪಾದಚಾರಿ ಸಾವು

Rashmi Kasaragodu
Updated On : 7 Dec 2013, 12:08 pm

ಹಾಸನ: ಬೈಕ್ ಡಿಕ್ಕಿ ಮಾಡಿದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಹೋಬಳಿ, ಬಾಗೂರು ಗ್ರಾಮದ ಲಕ್ಷ್ಮೇಗೌಡ (60) ಸಾವನ್ನಪ್ಪಿದ ದುರ್ದೈವಿ.
ಲಕ್ಷ್ಮೇಗೌಡ ರವರು ಬಾಗೂರು-ಹೊನ್ನೇನಹಳ್ಳಿ ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ಚಾಲಕನೊಂದಿಗೆ ಮಾತನಾಡುತ್ತಾ ನಿಂತಿದ್ದಾಗ ಬಾಗೂರು ಕಡೆಯಿಂದ ಬಂದ ಸುಜಕಿ ಸಮುರಾಯ್ ಬೈಕ್‌ನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯದಿಂದ ಲಕ್ಷ್ಮೇಗೌಡ ರವರಿಗೆ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಲಕ್ಷ್ಮೇಗೌಡ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮಧು ಅವರು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.



ಕಾರು ಡಿಕ್ಕಿ: ಬೈಕ್ ಸವಾರರ ಸಾವು

ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ 75ರ ಚಿಕ್ಕೋನಹಳ್ಳಿ ಗೇಟಟ್ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ತೀವ್ರ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ತಾಲೂಕಿನ ಮಾದಿಹಳ್ಳಿ ಗ್ರಾಮದ ಗೋವಿಂದೇಗೌಡ (50) ಮತ್ತು ಗಿರಿಗೌಡ (48) ಮೃತಪಟ್ಟ ದುರ್ದೈವಿಗಳಾಗಿದ್ದು, ರೇವಣ್ಣ ಗೌಡ ಎಂಬವರಿಗೆ ತೀವ್ರವಾಗಿ ತಲೆಗೆ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಈ ಪ್ರಕರಣ ಹಿರೀಸಾವೆ ಠಾಣೆಯಲ್ಲಿ ಪೊಲೀಸರು ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement