ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಗ್ರಾಮೀಣ ಮಕ್ಕಳ ಪ್ರತಿಭೆ ಗುರುತಿಸಿ'

Mainashree
Updated On : 8 Dec 2013, 9:14 am

ನುಗ್ಗೇಹಳ್ಳಿ: ಹಳ್ಳಿಯ ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಉತ್ತಮ ಪ್ರತಿಭಾವಂತರನ್ನಾಗಿ ಮಾಡಿದರೆ ಶಿಕ್ಷಣದ ಪ್ರಗತಿ ಆಗುತ್ತದೆ ಎಂಬುದಾಗಿ ಜಿಲ್ಲಾ ಪಂಚಾಯ್ತಿ ಸದಸ್ಯ  ಶಿವಶಂಕರ್‌ಕುಂಟೆ ಕಿವಿಮಾತು ಹೇಳಿದರು.
ಅವರು ಇಲ್ಲಿಗೆ ಸಮೀಪದ ನವಿಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಇತ್ತೀಚೆಗೆ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ಹಳ್ಳಿಯ ಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಗಮನಹರಿಸಬೇಕು ಎಂದರು. ಇದೇ ವೇಳೆ ಶಾಲೆಗೆ ಕಾಂಪೌಂಡ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಗ್ರಾಪಂ ಅಧ್ಯಕ್ಷ ಎನ್.ಕೆ. ನಾಗಪ್ಪ, ಮಾಜಿ ಅಧ್ಯಕ್ಷ ಎನ್.ಬಿ. ನಾಗರಾಜ, ಎಸ್‌ಡಿಎಂಸಿ ಅಧ್ಯಕ್ಷ ಎನ್.ಸಿ. ರವೀಶ್, ಮುಖ್ಯ ಶಿಕ್ಷಕ ಎಂ.ಸಿ. ನಂಜುಂಡಯ್ಯ, ಸಿಆರ್‌ಪಿ ಗಿಡ್ಡಯ್ಯ, ಶಿಕ್ಷಕ ಕೆ.ಎನ್. ಪರಮೇಶ್ವರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement