ಸಾರಿಗೆ ಸಿಬ್ಬಂದಿ ವಿರುದ್ಧ ಪ್ರತಿಭಟನೆ
ಹೊಳೆನರಸೀಪುರ: ತಾಲೂಕಿನ ಪಡುವಲಹಿಪ್ಪೆ ಮಾರ್ಗದಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳ ನಿರ್ವಾಹಕರು, ಚಾಲಕರು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿರುವ ದುರ್ವರ್ತನೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ನೂರಾರು ವಿದ್ಯಾರ್ಥಿಗಳು ಪಟ್ಟಣದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು.
ಪಡುವಲಹಿಪ್ಪೆ ಗ್ರಾಮದಲ್ಲಿ ಶೈಕ್ಷಣಿಕವಾಗಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿದಿನವೂ ಸಹ ಹೋಗಿ ಬರುವಂತೆ ಆಗಿದೆ. ಆದರೆ ಈ ಭಾಗಕ್ಕೆ ತೆರಳುವ ಬಸ್ಗ್ಳ ಚಾಲಕರು ಮತ್ತು ನಿರ್ವಾಹಕರುಗಳು ಬಸ್ಸಿನಲ್ಲಿ ಸಂಚರಿಸುವ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿ ಅವಹೇಳನಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ಕಳೆದ ನ. 28ರಂದು ಈ ಭಾಗದಲ್ಲಿ ಚಲಿಸುವ ಬಸ್ಗಳಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ತಾರತಮ್ಯ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಲ್ಲದೆ, ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವ ಚಾಲಕರು ಮತ್ತು ನಿರ್ವಾಹಕರ ಮೇಲೆ ಕ್ರಮಕೈಗೊಂಡು ನಿತ್ಯ ಸಂಚರಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರನ್ನು ಆಗ್ರಹಪಡಿಸಿದ್ದಾರೆ. ಪ್ರತಿಭಟನೆ ನೇತೃತ್ವವನ್ನು ಎಬಿವಿಪಿ ಜಿಲ್ಲಾ ಸಂಚಾಲಕ ಅಮಿತ್, ನಗರಕಾರ್ಯದರ್ಶಿ ಅಭಿಷೇಕ್, ಸಹಕಾರ್ಯದರ್ಶಿಯಾದ ದೀಕ್ಷಿತ್, ಶರತ್, ಸಹಕಾರ್ಯದರ್ಶಿ ರಮ್ಯ, ಭಾರತಿ, ರಾಜೇಂದ್ರ, ಚಂದನ್ ಸೇರಿದಂತೆ ಪಡುವಲಹಿಪ್ಪೆ ಹಾಗೂ ನಾಗಲಾಪುರ ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.