ಒಡೆಯರ್ ನಿಧನಕ್ಕೆ ಗಣ್ಯರ ಸಂತಾಪ
ಕ.ಪ್ರ.ವಾರ್ತೆ , ಹಾಸನ , ಡಿ. 10
ಮೈಸೂರು ರಾಜ ವಂಶಂಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕರಾದ ಎಚ್.ಎಸ್. ಪ್ರಕಾಶ್, ಸಿ.ಎನ್.ಬಾಲಕೃಷ್ಣ, ಎ. ಮಂಜು, ಕೆ.ಎಂ. ಶಿವಲಿಂಗೇಗೌಡ, ವೈ.ಎನ್. ರುದ್ರೇಶಗೌಡ, ಪಟೇಲ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ, ಬಿಜೆಪಿ ಜಿಲ್ಲಾಧ್ಯಕ್ಷ ಬೆಣ್ಣೂರು ರೇಣುಕಮಾರ್ ಇತರರು ತೀವ್ರ ಸಂತಾಪ ಸೂಚಿಸಿದ್ದಾರೆ. ಒಡೆಯರ್ ನಿಧನಕ್ಕೆ ಜಿಲ್ಲಾ ಪಂಚಾಯ್ತಿ ಸದಸ್ಯ ರಂಗಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಎನ್ಪ್‌ರಮೇಶ್, ಜಿಪಂ ಮಾಜಿ ಅಧ್ಯಕ್ಷೆ ಮಹದೇವಮ್ಮ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಆರ್. ದೊರೆಸ್ವಾಮಿ, ಮಾಜಿ ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೆಂಪನಂಜೇಗೌಡ, ಜೆಡಿಎಸ್ ಮುಖಂಡ ಮರದ ಜಗದೀಶ್, ಮುರಳಿ, ಗೋಕುಲ ವಿದ್ಯಾಸಂಸ್ಥೆ ಕಾರ್ಯದರ್ಶಿ ನಾರಾಯಣ್, ತಾಪಂ ಮಾಜಿ ಉಪಾಧ್ಯಕ್ಷ, ಹೆಚ್.ಜೆ. ಕಿರಣ್, ಗ್ರಾಪಂ ಅಧ್ಯಕ್ಷೆ ಶೋಭಾ ರಾಜಶೇಖರ್, ನುಗ್ಗೇಹಳ್ಲಿ ಗ್ರಾಪಂ ಸದಸ್ಯ ಎನ್.ಆರ್. ಮಹೇಶ್ ಇತರರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.