ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

16ಕ್ಕೆ ಬಾಲಗಂಗಾಧರನಾಥ ಪ್ರತಿಮೆ ಅನಾವರಣ

Srinivasa Murthy VN
Updated On : 11 Dec 2013, 9:41 am

ಹಾಸನ: ಶ್ರೀ ಆದಿಚುಂಚನಗಿರಿಯ 71ನೇ ಪೀಠಾಧಿಪತಿ ಭೈರವೈಕ್ಯ ಶ್ರೀಡಾ.ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆ ಅನಾವರಣ ಹಾಗೂ 72ನೇ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಪುರಪ್ರವೇಶ ಮತ್ತು ಗುರುವಂದನಾ ಕಾರ್ಯಕ್ರಮ ಡಿ. 14 ರಂದು ನಡೆಯಲಿದೆ ಎಂದು ಪ್ರತಿಮೆ ಪ್ರತಿಷ್ಠಾಪನಾ ಸಮಿತಿಯ ಗೌರವಾಧ್ಯಕ್ಷ ಕೆ.ಟಿ. ಕೃಷ್ಣೇಗೌಡ ತಿಳಿಸಿದ್ದಾರೆ.
ಅನಾವರಣ ಸಮಾರಂಭ: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರಲ್ಲದೇ, ಪ್ರತಿಮೆ ಅನಾವರಣ ಮಾಡಲಿದ್ದಾರೆ ಎಂದು ಕೃಷ್ಣೇಗೌಡ ತಿಳಿಸಿದರು.
ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ತೆಂಕಲಗೂಡು ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀಸದಾಶಿವಸ್ವಾಮಿಜಿ, ಮಾದ್ರೆಯ ಮುದ್ದಿನಕಟ್ಟೆ ಮಠದ ಶ್ರೀಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠದ ಶ್ರೀಮಹಾಂತ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗೌರವ ಉಪಸ್ಥಿತಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗೌರವ ಉಪಸ್ಥಿತಿ ವಹಿಸಲಿದ್ದು, ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಗೌರವ ಸಮರ್ಪಣೆ ನೇರವೇರಿಸುವರು.
ಶಾಸಕ ಎಚ್.ಡಿ. ರೇವಣ್ಣ, ಎಚ್.ಕೆ. ಕುಮಾರಸ್ವಾಮಿ, ಎ. ಮಂಜು, ಸಿ.ಎನ್. ಬಾಲಕೃಷ್ಣ, ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಬಿ.ಬಿ.ಶಿವಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ ಹಾಗೂ ಇತರರು ಭಾಗವಹಿಸುವರು ಎಂದು ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ತಾಲೂಕು ಒಕ್ಕಲಿಂಗ ಸಂಘದ ಅಧ್ಯಕ್ಷ ಎಚ್.ಎಂ.ವಿಶ್ವನಾಥ್, ಜಿಲ್ಲಾ ಪಂಚಾಯ್ತಿ ಸದಸ್ಯ ಭೈರಮುಡಿ ರಾಮಚಂದ್ರ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದ ಅವರು, ಸುಮಾರು ರು. 4 ಲಕ್ಷ ವೆಚ್ಚದಲ್ಲಿ ವೆಚ್ಚದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ 3 ಅಡಿಯ ಪ್ರತಿಮೆಯನ್ನು ಸಕಲೇಶಪುರ ತಾಲೂಕಿನ ಕಳಲೆ ಕೂಡಿಗೆಯ ವೃತ್ತದಲ್ಲಿ ನಿರ್ಮಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಎಚ್.ಟಿ. ಉಮೇಶ್, ಖಜಾಂಚಿ ಕೆ.ಟಿ. ರಾಮೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement