'ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ'
ಬೇಲೂರು: ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ್ಪಕ್ಷಕ್ಕೆ ಯಾವುದೆ ರೀತಿ ತೊಂದರೆಯಿಲ್ಲ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಶಾಸಕ ವೈ.ಎನ್. ರುದ್ರೇಶಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕದ ಅಧ್ಯಕ್ಷ ಹರಿಯಪ್ಪ ಅಯೋಜಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಸರ್ಕಾರಿ ಅಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದಿಲ್ಲಿ ಹೊರತು ಪಡಿಸಿದರೆ ಹಿಂದಿನ ಚುನಾವಣೆಯಲ್ಲೂ ಆಯಾ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿತ್ತು. ಅದರಂತೆ ಮತದಾರರು ಮತಚಲಾಯಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಈ ಹಿಂದಿನ 10 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದೆ. ಮುಂದಿನ ಲೋಕಸಭೆ ಚುನವಣೆಯಲ್ಲಿ ಬಹುಮತದೊಂದಿಗೆ ಪುನಃ ಅಧಿಕಾರ ನೆಡೆಸಲಿದೆ ಎಂದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷವನ್ನು ಸದೃಢವಾಗಿ ನಡೆಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹಲವರು ಯೋಜನೆಗಳನ್ನು ರೂಪಿಸುವ ಮೂಲಕ ಜನಪರ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷ ಹರಿಯಪ್ಪ,ತಾಲೂಕು ಕಾಂಗ್ರೆಸ್ ಅಧ್ಯಕ್ಷ ವೈ.ಟಿ. ದಾಮೋದರ್, ಪುರಸಭೆ ಸದಸ್ಯರಾದ ಬಿ.ಎಲ್. ಧರ್ಮೇಗೌಡ, ಸತೀಶ್, ಮುಖಂಡರಾದ ದಾಸಪ್ಪ, ಸತ್ಯನಾರಾಯಣ, ವೈಧ್ಯಾಧಿಕಾರಿ ನರಸೇಗೌಡ ಇದ್ದರು.