ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಿ'

Vishwanath S
Updated On : 15 Dec 2013, 1:18 am

ಹೊಳೆನರಸೀಪುರ: ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಕೃಷಿಯನ್ನು ಲಾಭದಾಯಕವಾಗಿ ಮಾಡಲು ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ  ಎಚ್.ಎನ್. ದೇವೇಗೌಡ (ಪಾಪಣ್ಣಿ) ಕರೆ ನೀಡಿದ್ದಾರೆ. ಅವರು ಇತ್ತೀಚೆಗೆ ತಾಲ್ಲೂಕಿನ ಕಸಬ ಹೋಬಳಿಯ ಮಾರನಾಯಕನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಸುರಕ್ಷಿತ ಕೀಟನಾಶಕಗಳ ಬಳಕೆ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವುದರಿಂದ ಹೆಚ್ಚಿನ ಉತ್ಪಾದಕತೆಯೊಂದಿಗೆ ಪರಿಸರ ಮಾಲಿನ್ಯ ತಡೆಯಬಹುದೆಂದು ಹೇಳಿದ ಅವರು ತಜ್ಞರು ತರಬೇತಿಯಲ್ಲಿ ತಿಳಿಸುವ ಮಾಹಿತಿಯನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ತಿಳಿಸಿದರು.
ವಿವರಣೆ: ಕಂದಲಿಯ ಕೃಷಿ ವಿಜ್ಞಾನ ಕೇಂದ್ರದಿಂದ ಆಗಮಿಸಿದ್ದ ಕೇಂದ್ರದ ಮುಖ್ಯಸ್ಥ ಹಾಗೂ ಕೀಟ ತಜ್ಞ ಡಾ. ಬಸವರಾಜು ಮಾತನಾಡಿ, ನಾನಾ ಬೆಳೆಗಳಲ್ಲಿ ಕಂಡುಬರುವ ಕೀಟ, ರೋಗಗಳು ಹಾಗೂ ಅವುಗಳ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರಲ್ಲದೇ, ಕೀಟನಾಶಕಗಳ ತೀವ್ರತೆಯನ್ನು ಗುರುತಿಸುವ ಬಗ್ಗೆ ಮತ್ತು ಬಳಸುವ ಸಮಯದಲ್ಲಿ ರೈತರು ತೆಗೆದುಕೊಳ್ಳಬೇಕಾದ ಜಾಗೃತಿ ಕ್ರಮಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಡಾ. ಭಾನುಪ್ರಕಾಶ್, ತಾಲೂಕು ಪಂಚಾಯ್ತಿ ಅಧ್ಯಕ್ಷ ಪುಷ್ಪಗೌಡೇಗೌಡ ಅವರು ತರಬೇತಿಯಿಂದ ಪಡೆದ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ಉಪಾಧ್ಯಕ್ಷ  ಹೆಚ್.ಬಿ.ನಂಜುಂಡಪ್ಪ  ಮಾತನಾಡಿ, ರೈತರಿಗೆ ಉಪಯುಕ್ತವಾದ ಯೋಜನೆಗಳಿದ್ದು ಅವುಗಳನ್ನು ಉಪಯೋಗಿಸಿಕೊಂಡು ರೈತರು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement