ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸರ್ಕಾರಿ ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಸದೃಢ

Vishwanath S
Updated On : 15 Dec 2013, 1:18 am

ಕ.ಪ್ರ.ವಾರ್ತೆ ,  ಹಾಸನ ,  ಡಿ. 14
ಸರ್ಕಾರಿ ನೌಕರರು ಒತ್ತಡದ ಕೆಲಸದ ಮದ್ಯೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಒತ್ತಡದ ಕೆಲಸದಿಂದಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುವಂತಹ ಸಂಗತಿಗಳೆ ಹೆಚ್ಚಾಗಿದೆ. ಆದ್ದರಿಂದ ಈ ರೀತಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕ್ರಿಕೆಟ್ ಮಾತ್ರವಲ್ಲ: ಮನುಷ್ಯನ ಆರೋಗ್ಯ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅತ್ಯವಶ್ಯಕವಾಗಿದೆ. ಪ್ರಸ್ತುತ ಮಕ್ಕಳಿಗೂ ಶಾಲಾ ಆವಧಿಯಿಂದಲೇ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಪೋಷಕರು ಸಹಕಾರ ನೀಡಬೇಕು. ದೇಶದಲ್ಲಿ ಕ್ರೀಡೆ ಎಂದರೆ ಕ್ರಿಕೆಟ್ ಮಾತ್ರ ಎಂಬಂತಾಗಿದೆ. ಎಲ್ಲಾ ಯುವಕರು ಕ್ರಿಕೆಟ್‌ಗೆ ಮಾತ್ರ ಸೀಮಿತವಾಗದೆ ಇತರೆ ಕ್ರೀಡೆಗಳಲ್ಲಿ ಆಸಕ್ತಿಯನ್ನು ಹೊಂದಿ ಅವುಗಳಿಗೆ ಪ್ರೋತ್ಸಾಹವನ್ನು ನೀಡುವ ಮೂಲಕ ಕ್ರೀಡೆ ಮಹತ್ವವನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಸದ್ಬಳಕೆ ಇಲ್ಲ: ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶನ ಶಿವಾನಂದ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ಇರುವಂತಹ ಸೌಲಭ್ಯಗಳನ್ನು ಬಳಸಿಕೊಳ್ಳುವಲ್ಲಿ ಸರ್ಕಾರಿ ನೌಕರರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಟೆನ್ನಿಸ್ ಕ್ರೀಡಾಂಗಣ ಹೊರತುಪಡಿಸಿ ಉಳಿದೆಲ್ಲಾ ಕ್ರೀಡಾಂಗಣಗಳು ಇದ್ದರೂ ಸಹ ಸರ್ಕಾರಿ ನೌಕರರು ಇವುಗಳ ಸದ್ಬಳಕೆ ಮುಂದಾಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕ್ರೀಡೆ ಎಂಬುವುದು ಎಲ್ಲಾ ವಯಸ್ಸಿನ ಜನರಿಗೂ ಸಹಕಾರಿಯಾಗಿದ್ದು, ಯುವಕರು ಕೆಲಸಕ್ಕೆ ಸೇರಿದ ದಿನದಿಂದ ಕ್ರೀಡೆಗಳಲ್ಲಿ ತೊಡಗಿಕೊಳ್ಳುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಸ್ಫೂರ್ತಿಯಾಗಬೇಕು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಮಂಜೇಗೌಡರು ಮಾತನಾಡಿ, ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸುವುದು ಕಡಿಮೆಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕ್ರೀಡೆಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಸರ್ಕಾರಿ ನೌಕರರು ತಮ್ಮ ಕರ್ತವ್ಯ ದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು. ಇಂತಹ ಕ್ರೀಡೆಗಳು ರಾಜ್ಯ ಮಟ್ಟದ ಕ್ರೀಡೆಗಳಿಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.  
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ, ಪ್ರಧಾನ ಕಾರ್ಯದಾರ್ಶಿ ಶ್ರೀನಿವಾಸ್, ಖಜಾಂಚಿ ಅಣ್ಣೇಗೌಡ, ಗೌರವ ಅಧ್ಯಕ್ಷ ತಮ್ಮಣ್ಣಗೌಡ, ರಾಜ್ಯ ಪರಿಷತ್ ಸದಸ್ಯ ಯು.ಎ.ಮನು, ಕ್ರೀಡಾ ಕಾರ್ಯದರ್ಶಿ ಸತೀಶ್, ಸಾಂಸ್ಕೃತಿಕ ಕಾರ್ಯದರ್ಶಿ ಎ.ಜೆ. ವೆಂಕಟೇಶ್, ದಿನೇಶ್, ಪ್ರಕಾಶ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement