ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕವಿ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವ ಆಚರಣೆ

Srinivasa Murthy VN
Updated On : 16 Dec 2013, 12:27 pm

ಕ.ಪ್ರ. ವಾರ್ತೆ, ಹಾಸನ, ಡಿ 15
ಲೋಕ ಪ್ರಭು ಸಂತ ಶ್ರೇಷ್ಠ ಕವಿ ಕನಕದಾಸರ 526ನೇ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಿತು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಕನಕ ನೌಕರರ ಸಂಘದವತಿಯಿಂದ ನಡೆದ ಕಾರ್ಯಕ್ರಮವನ್ನು ರಾಜ್ಯ ಕುರುಬರ ಸಂಘ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನಕದಾಸರು ಕೊಟ್ಟಂತ ಕೊಡುಗೆ ಅಪಾರವಾಗಿದ್ದು, ಅವರ ಕೊಡುಗೆಯನ್ನು ಮರೆಯುವಂತಿಲ್ಲ. ದಾಸರ ಸಾಹಿತ್ಯವು ಇಂದಿಗೂ ಕೂಡ ಎಲ್ಲರ ಮನದಲ್ಲಿ ಉಳಿದಿದೆ ಎಂದರು.
ಶಿಕ್ಷಣ ಹೊಂದಬೇಕು: ಜನಾಂಗದ ಬಂಧುಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು. ಪೋಷಕರು ತಮ್ಮ ಮಕ್ಕಳಿಗೆ ಶೈಕ್ಷಣಿಕವಾಗಿ ಸದೃಢರನ್ನಾಗಿ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತಾಗಬೇಕು.
ಮಕ್ಕಳಿಗೆ ಶಿಕ್ಷಣವೆ ಆಸ್ತಿಯಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿದಾ ಸಮಾಜದ ಅಭಿವೃದ್ಧಿ ಸಾಧ್ಯ ಎಂದ ಅವರು, ಸಮಾಜದ ಅಭಿವೃದ್ಧಿಗೂ ಸಹ ಸಮಾಜದ ಮಕ್ಕಳು ಹೆಚ್ಚು ಹೆಚ್ಚಾಗಿ ಶಿಕ್ಷಣ ಹೊಂದಬೇಕು ಎಂದು ಹೇಳಿದರು.  
ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಇತರರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆ ಬಿ.ಟಿ.ಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಕನಕ ನೌಕರರ ಸಂಘದ ಕಾರ್ಯದರ್ಶಿ ಎಚ್.ಸಿ. ಶಿವರಾಂ, ಚನ್ನರಾಯಪಟ್ಟಣದ ಲೋಕೇಶ್ ಕನಕದಾಸರ ಕುರಿತು ಉಪನ್ಯಾಸ ನೀಡಿದರು.
ಬೆಂಗಳೂರು ಸಹಾಯಕ ಕಮೀಷನರ್ ನಾಗರಾಜ್, ನಗರಾಭಿವೃದ್ಧಿ ಪ್ರಾಧೀಕಾರದ ಮಾಜಿ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ನವಿಲೆ ಅಣ್ಣಪ್ಪ, ಕುರುಬರ ಸಂಘದ ಅಧ್ಯಕ್ಷ ಪಟೇಲ್ ಶಿವಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದೇಗೌಡ, ಅನೀಲ್ ಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement