ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಏಡ್ಸ್‌ಗೆ ಮುಂಜಾಗರೂಕತೆಯೇ ಉತ್ತಮ ಚಿಕಿತ್ಸೆ: ತಿಮ್ಮಯ್ಯ

Vishwanath S
Updated On : 17 Dec 2013, 12:28 pm

ಆಲೂರು: ಏಡ್ಸ್ ಒಂದು ಮಾರಣಾಂತಿಕ ಕಾಯಿಲೆ. ಚಿಕಿತ್ಸೆಗಿಂತ ಮುಖ್ಯವಾಗಿ ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸುವುದೇ ಬಚಾವಾಗುವ ಮಾರ್ಗವೆಂದು ತಾಲೂಕು ಆರೋಗ್ಯಾಧಿಕಾರಿ ಎಚ್.ಆರ್.ತಿಮ್ಮಯ್ಯ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಹಾಗೂ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಏಡ್ಸ್ ನಿಯಂತ್ರಣ ಮತ್ತು ರಕ್ತದಾನದ ಮಹತ್ವ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸೋಂಕಾದ ವ್ಯಕ್ತಿಯ ದೇಹದ ರಕ್ಷಣಾ ವ್ಯವಸ್ಥೆ ಹದಗೆಡುವ ಕಾರಣ ಇಂತಹ ವ್ಯಕ್ತಿ ಸುಲಭವಾಗಿ ಯಾವ ರೋಗಕ್ಕೆ ಬೇಕಾದರೂ ತುತ್ತಾಗಬಲ್ಲ. ಎಚ್‌ಐವಿ ರೋಗಿಗಳಲ್ಲಿ ಭಾರತ 2ನೇ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯ ಎಂದರು.
ಕಾಲೇಜಿನ ಪ್ರಾಂಶುಪಾಲ ಯು.ಎ.ವೆಂಕಟರಾಮು ಮಾತನಾಡಿ, ರಕ್ತದಾನ ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ ವ್ಯಕ್ತಿಯ ಜೀವ ಉಳಿಸುತ್ತದೆ ಎಂದರು. ಪ್ರಬಂಧ ಸ್ಪರ್ಧೆ ಹಾಗೂ ಭಾಷಣದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪ ಪ್ರಾಂಶುಪಾಲ ಕೃಷ್ಣಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ತಮ್ಮಯ್ಯ, ಕಸಾಪ ಅಧ್ಯಕ್ಷ ಗುಲಾಂ ಸತ್ತಾರ್, ಪತ್ರಕರ್ತರ ಸಂಘದ ಅಧ್ಯಕ್ಷ ರಾಘು ಹಾಗೂ ಉಪನ್ಯಾಸಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement