ಡೀಸೆಲ್ ಬೆಲೆ ಏರಿಕೆಯಿಂದ ನಷ್ಟ; ರಾಮಲಿಂಗಾರೆಡ್ಡಿ
ಹಾಸನ: ಡೀಸೆಲ್ ಬೆಲೆ ಏರಿಕೆಯಿಂದಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನಷ್ಟದಲ್ಲಿದ್ದು, ಸರಿದೂಗಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಎಸ್ಆರ್ಟಿಸಿಯು 160 ಕೋಟಿ ಹಾಗೂ ಬಿಎಂಟಿಸಿಯು 140 ಕೋಟಿ ನಷ್ಟ ಅನುಭವಿಸುತ್ತಿದೆ. ನಷ್ಟ ತುಂಬಿಸುವ ಕಾರ್ಯ ನಡೆಸುತ್ತಿರುವುದಾಗಿ ಹೇಳಿದರು. ಆರ್ಟಿಒ ಇಲಾಖೆಯಲ್ಲಿ ಸುಮಾರು 4 ಸಾವಿರ ಕೋಟಿ ಆದಾಯ ಬರುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ. ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೋಟಾರ್ ಇನ್ಸ್ಪೆಕ್ಟರ್ ಹುದ್ದೆ, ಜೂನಿಯರ್ ಮೋಟಾರ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಉಳಿದಿವೆ ಎಂದರು. ವೋಲ್ವೋ ಬಸ್ಗಳಲ್ಲಿ 3 ತಿಂಗಳ ಒಳಗಾಗಿ ಪ್ರಿ ಎಗ್ಸಿಟ್ ಡೋರ್ಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಯಾವ ಬಸ್ಗಳು ಇದನ್ನು ಪಾಲಿಸುವುದಿಲ್ಲವೋ ಅಂತಹ ಬಸ್ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಹೈದರಾಬಾದ್ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಈ ಬಗ್ಗೆ ದೆಹಲಿಯಲ್ಲಿ ಸಭೆ ನಡೆಯಲಿದೆ. ಹಾವೇರಿ ಬಸ್ ದುರಂತಕ್ಕೆ ಸಂಬಂಧಿಸಿದ ವರದಿ ಇನ್ನೂ ಸಿಕ್ಕಿಲ್ಲ ಎಂದರು.
ಜಿಲ್ಲೆಗೆ ಹೊಸ ಬಸ್: ಹಾಸನ ಜಿಲ್ಲೆಗೆ 70ರಿಂದ 80 ಹೊಸ ಬಸ್ಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಇರುವ ಕೆಲ ಹಳೆ ಬಸ್ಗಳನ್ನು ತೆಗೆದು ಹೊಸ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳ ಅನುಕೂಲಕ್ಕಾಗಿ ನಷ್ಟು ಆದ್ರೂ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.