ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಕ್ಕಳ ಜ್ಞಾನಾರ್ಜನೆಗೆ ರಸಪ್ರಶ್ನೆ ಕಾರ್ಯಕ್ರಮ ಸಹಕಾರಿ

Vishwanath S
Updated On : 17 Dec 2013, 12:25 pm

ಹೊಳೆನರಸೀಪುರ: ಪಠ್ಯ ಚಟುವಟಿಕೆಗಳ ಜೊತೆಗೆ ಮಕ್ಕಳ ಮನೋವಿಕಾಸಕ್ಕೆ ಹಾಗೂ ಜ್ಞಾನಾರ್ಜನೆಗೆ ಸಹಕಾರಿಯಾಗುವ ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಅವರ ಭವಿಷ್ಯದ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯಕಾರಿಯಾಗಲಿದೆ ಎಂದು ಪುರಸಭಾಧ್ಯಕ್ಷೆ ಎಚ್.ಆರ್. ಕಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕರವೇ ತಾಲೂಕು ಘಟಕದ ವತಿಯಿಂದ ಪಟ್ಟಣದ ಗ್ರೀನ್‌ವುಡ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬುದ್ಧಿ ಚುರುಕಾಗಿಸುವ, ಜ್ಞಾನವನ್ನು ಓರೆಗೆ ಹಚ್ಚುವ ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗೆಲವು ಖಚಿತ: ಮಾತನಾಡಿದ ಎಎಸ್ಪಿ ವಿನಾಯಕ ಪಾಟೀಲ್, ಜ್ಞಾನಾರ್ಜನೆಗೆ ಸಹಕಾರಿಯಾಗುವ ಕ್ವಿಜ್ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗುವಂತೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವಮಾದಪ್ಪ ಮಾತನಾಡಿ, ನಿರಂತರವಾಗಿ ಜ್ಞಾನದ ಹಸಿವನ್ನು ಇಂಗಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಉತ್ಸುಕರಾಗುವಂತೆ ಕರೆ ನೀಡಿದರು.
ಗ್ರೀನ್‌ವುಡ್ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳ, ಕರವೇ ತಾಲೂಕು ಘಟಕದ ಅಧ್ಯಕ್ಷ ಕೆರಗೋಡು ಮಹೇಶ್ ಮಾತನಾಡಿದರು.ರಸಪ್ರಶ್ನೆ ಕಾರ್ಯಕ್ರಮದಲ್ಲಿ ದೊಡ್ಡಕಾಡನೂರಿನ ಜೆಎಸ್‌ಎಸ್ ವಿದ್ಯಾಪೀಠದ ಚಿರಂತ ಶಿಲ್ಪ -ಪ್ರಥಮ ಸ್ಥಾನ, ಆಲಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮನಮೋಹನ್ ರಾಕೇಶ್ ದ್ವಿತೀಯ ಸ್ಥಾನವನ್ನು, ನಗರನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹೇಮಾವತಿ- ಶಿವಕುಮಾರ ತಂಡವು ತೃತೀಯ ಬಹುಮಾನ ಪಡೆದರು. ತಾಪಂ ಸದಸ್ಯ ಮಂಜುನಾಥ್, ಗ್ರೀನ್‌ವುಡ್ ಶಾಲೆಯ ಕಾರ್ಯದರ್ಶಿ ನೂರ್ ಫಾತಿಮ, ಕರವೇ ತಾಲೂಕು ಉಪಾಧ್ಯಕ್ಷ ರಂಗಸ್ವಾಮಿ, ಹಳೇಕೋಟೆ ಹೋಬಳಿ ಅಧ್ಯಕ್ಷ ರೇವಣ್ಣ, ಮೊಗಣ್ಣಗೌಡ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement