21, 22ರಂದು ನವೋದಯ ಪ್ರೌಢಶಾಲೆ ಸುವರ್ಣ ಮಹೋತ್ಸವ ಆಚರಣೆ
ಕ.ಪ್ರ.ವಾರ್ತೆ ಹೊಳೆನರಸೀಪುರ ಡಿ. 17
ತಾಲೂಕಿನ ದೊಡ್ಡಕುಂಚೆ ಗ್ರಾಮದಲ್ಲಿನ ನವೋದಯ ಪ್ರೌಢಶಾಲಾ ವಿಭಾಗದ ಸುವರ್ಣ ಮಹೋತ್ಸವ ಆಚರಣಾ ಸಮಾರಂಭವನ್ನು ಡಿ. 21ರ ಶನಿವಾರ ಹಾಗೂ ಡಿ. 22ರ ಭಾನುವಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಲಿದ್ದು, ಸಂಸ್ಥೆಯ ಸ್ಮರಣ ಸಂಚಿಕೆಯನ್ನು ರಾಜ್ಯದ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ನಡೆಸಿಕೊಡಲಿದ್ದಾರೆ ಎಂದು ನವೋದಯ ವಿದ್ಯಾ ಸಂಘದ ಅಧ್ಯಕ್ಷರಾದ ಜೆ.ಎಸ್. ಜಯರಾಮ್ ತಿಳಿಸಿದರು.
ಸಮಾಂರಂಭದ ಸಂದರ್ಭದಲ್ಲಿ ಅಕ್ಷರ ದಾಸೋಹ ಕೊಠಡಿಯನ್ನು ಶಾಸಕ ಎಚ್.ಡಿ. ರೇವಣ್ಣ ಉದ್ಘಾಟಿಸಲಿರುವುದಾಗಿ ತಿಳಿಸಿದರು. ಮೆರವಣಿಗೆಗೆ ಜಿ.ಪಂ. ಅಧ್ಯಕ್ಷೆ ಅಂಬಿಕಾ ರಾಮಣ್ಣ ಚಾಲನೆ ನೀಡಲಿದ್ದು, ತುಮಕೂರಿನ ರಾಮಕೃಷ್ಣಾಶ್ರಮದ ಅಧ್ಯಕ್ಷ ಶ್ರೀ ಡಾ. ವೀರೇಶಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಎರಡು ದಿನಗಳ ಕಾಲ ನಡೆಯಲಿರುವ ಸುವರ್ಣ ಮಹೋತ್ಸವದಲ್ಲಿ ಶಾಲೆಯ ಸ್ಥಾಪನೆಗೆ ಕಾರಣರಾದವರ ಕುಟುಂಬಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಚನ್ನರಾಯಪಟ್ಟಣದ ತಹಸೀಲ್ದಾರ್ ಡಾ.ಎಚ್.ಎಲ್. ನಾಗರಾಜು, ರಾಷ್ಟ್ರ ಪ್ರಶಸ್ತಿ ಪುರಸ್ಕತ ಪರಿಸರ ಪ್ರೇಮಿ ಚ.ನಾ. ಅಶೋಕ್ ಅವರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ನವೋದಯ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಿ.ಎನ್. ನವೀನ್ ಮಾತನಾಡಿ, ಶಾಲಾ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಮಾಜಿ ಶಾಸಕರಾದ ಡಾ.ಎನ್.ಬಿ. ನಂಜಪ್ಪ, ಸಿ.ಎಸ್. ಪುಟ್ಟೇಗೌಡ ಶಾಸಕರಾದ ವೈ.ಎನ್. ರುದ್ರೇಶಗೌಡ, ಎ. ಮಂಜು, ವಿಧಾನಪರಿಷತ್ ಸದಸ್ಯರಾದ ಗೋ. ಮಧುಸೂದನ್, ಬಿ.ಬಿ. ಶಿವಪ್ಪ , ಕಾಂಗ್ರೆಸ್ ನಾಯಕಿ ಅನುಪಮ ಭಾಗವಹಿಸುವರು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹಾಗೂ ಹೆಸರಾಂತ ಸಾಹಿತಿ ಡಾ. ಮಳಲಿ ವಸಂತಕುಮಾರ್ ಉಪನ್ಯಾಸ ನೀಡುವುದಾಗಿ ತಿಳಿಸಿದ ನವೀನ್, ಸಮಾರೋಪ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದಸ್ವಾಮೀಜಿ ಹಾಗೂ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಪಟೇಲ್ ಮಂಜುನಾಥ್, ಪ್ರಾಂಶುಪಾಲ ಸಿ.ಪುಟ್ಟಣ್ಣ, ಸಂಸ್ಥೆಯ ನಿರ್ದೇಶಕ ಚಂದ್ರೇಗೌಡ, ಗ್ರಾಮದ ಹಿರಿಯ ಶಿವರಾಮೇಗೌಡ, ರವಿಶಂಕರ್, ಶಿವರಾಮೇಗೌಡ ಇತರರು ಇದ್ದರು.