ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

27ರಂದು ಜಿಲ್ಲ್ಲಾ ಯುವ ಸಂಸತ್ ಕಾರ್ಯಕ್ರಮ

Srinivasa Murthy VN
Updated On : 20 Dec 2013, 12:26 pm

ಹಾಸನ: ಜಿಲ್ಲಾಮಟ್ಟದ ಯುವಸಂಸತ್ ಕಾರ್ಯಕ್ರಮವನ್ನು ಡಿ. 27ರಂದು ಬೆಳಿಗ್ಗೆ 10.30ಕ್ಕೆ ಹಾಸನ ಜಿಲ್ಲಾ ಪಂಚಾಯತ್‌ನ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಿ.ಆರ್. ಬಸವರಾಜ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಹಾಸನ: ವಾರ್ತಾ ಇಲಾಖೆಯು 2013-14ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಆಸಕ್ತ ಪರಿಶಿಷ್ಟ ಜಾತಿಯ 40 ಸಂಖ್ಯೆಯ ನಿರುದ್ಯೋಗಿ ಪದವೀಧರ ಯುವಕ-ಯುವತಿಯರಿಗೆ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅಂದರೆ ಛಾಯಾಗ್ರಹಣ, ಸಂಕಲನ, ಮಲ್ಟಿ ಮೀಡಿಯಾದಲ್ಲಿ ಒಂದು ತಿಂಗಳ ಸರ್ಟಿಫಿಕೇಟ್ ಕೋರ್ಸ್‌ನ ರೀತಿಯಲ್ಲಿ ತಾಂತ್ರಿಕ ವೃತ್ತಿ ತರಬೇತಿಯನ್ನು ನೀಡಲು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರ ಇಲ್ಲಿ ಜನವರಿ, ಫೆಬ್ರವರಿ 2014ನೇ ಮಾಹೆಯಲ್ಲಿ ನಡೆಸಲು ಇಲಾಖೆಯು ಉದ್ದೇಶಿಸಿದೆ. ಈ ಸಂಬಂಧ ಪರಿಶಿಷ್ಠ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತರಬೇತಿ ಅವಧಿ 30 ದಿನಗಳಿದ್ದು, ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸೌಕರ್ಯವನ್ನು ಇಲಾಖೆಯಿಂದ ಒದಗಿಸಲಾಗುತ್ತಿದೆ. ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಕಂಪ್ಯೂಟರ್ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋವುತಿ 21ರಿಂದ 35 ವರ್ಷದೊಳಗಿರಬೇಕು. ತರಬೇತಿಗಾಗಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಇಲಾಖೆಯು ಪರಿಶೀಲಿಸಿ ಒಟ್ಟು 40 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಯಸ್ಸು, ವಿಳಾಸ, ವಿದ್ಯಾರ್ಹತೆ, ಜಾತಿ ಇತ್ಯಾದಿ ಸ್ವ-ವಿವರವುಳ್ಳ ಮಾಹಿತಿಯನ್ನು ಬಿಳಿ ಹಾಳೆಯ ಮೇಲೆ ಬೆರಳಚ್ಚುಗೊಳಿಸಿ ಅಥವಾ ಕೈಯಿಂದ ಸ್ಪಷ್ಟವಾಗಿ ತಯಾರಿಸಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಡಿ. 31ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ವಾರ್ತಾ ಇಲಾಖೆ, ವಾತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ, ಕೊರಿಯರ್ ಮೂಲಕ ತಾಂತ್ರಿಕ ವೃತ್ತಿ ತರಬೇತಿಗಾಗಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ, ಉಪ ನಿರ್ದೇಶಕರು (ಚಲನಚಿತ್ರ), ವಾತಾ ಇಲಾಖೆ, ಬೆಂಗಳೂರು, ದೂರವಾಣಿ ಸಂಖ್ಯೆ 080-2202805256ರ ಮೂಲಕ ಸಂಪರ್ಕಿಸಬಹುದು ಎಂದು ವಾತಾ ಇಲಾಖೆ ನಿರ್ದೇಶಕ  ಎನ್.ಆರ್. ವಿಶುಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement