ಇಂದು ರಾಜ್ಯ ಮಟ್ಟದ ಸಾಂಸ್ಕೃತಿಕ ಸಹಪಠ್ಯ ಸ್ಪರ್ಧೆ
ಕ.ಪ್ರ.ವಾರ್ತೆ ಹಾಸನ ಡಿ. 19
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಆಶ್ರಯದಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ನಗರದ ಎವಿಕೆ ಕಾಲೇಜಿನಲ್ಲಿ ಡಿ. 20ರಂದು ಬೆಳಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ.
ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಪ್ರಧಾನಿ ಹಾಗೂ ಸಂಸದ ಹೆಚ್.ಡಿ. ದೇವೇಗೌಡ ಗೌರವಾನ್ವಿತ ಉಪಸ್ಥಿತಿ ವಹಿಸುವರು. ಶಾಸಕ ಹೆಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ, ಶಾಸಕ ಹೆಚ್.ಡಿ. ರೇವಣ್ಣ, ಹೆಚ್.ಕೆ. ಕುಮಾರಸ್ವಾಮಿ, ಎ. ಮಂಜು, ಕೆ.ಎಂ. ಶಿವಲಿಂಗೇಗೌಡ, ವೈ.ಎನ್. ರುದ್ರೇಶ ಗೌಡ, ಸಿ.ಎನ್. ಬಾಲಕೃಷ್ಣ, ಪಟೇಲ್ ಶಿವರಾಂ ಹಾಗೂ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ನಗರಸಭೆ ಆಯುಕ್ತ ವಿ.ಹೆಚ್. ಕೃಷ್ಣಮೂರ್ತಿ ಆಗಮಿಸುವರು.
ರಾಜ್ಯಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯ ಸ್ಪರ್ಧೆಗಳ ಸಮಾರೋಪ ಸಮಾರಂಭ-2013-14 ನಗರದ ಎವಿಕೆ ಕಾಲೇಜಿನ ಸಭಾಂಗಣದಲ್ಲಿ ಸಂಜೆ 4ಕ್ಕೆ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎನ್. ರಾಜಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ, ಎಂಸಿಇ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜಿ.ಟಿ.ಕುಮಾರ್ ಭಾಗವಹಿಸುವರು.