ದಂಡಿಗನಹಳ್ಳಿ ಹೋಬಳಿ ಮಟ್ಟದ ಅಧಿಕಾರಿಗಳ ಸಭೆ
ಹಾಸನ: ಚನ್ನರಾಯಪಟ್ಟಣ ತಾಲೂಕು ದಂಡಿಗನಹಳ್ಳಿ ಹೋಬಳಿ ವ್ಯಾಪ್ತಿಯ ಅಧಿಕಾರಿಗಳ ಸಭೆ ಶಾಸಕ ಎಚ್. ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ನಡೆಯಿತು.
ದಂಡಿಗನಹಳ್ಳಿ ಹೋಬಳಿಯಲ್ಲಿ ಅನೇಕ ಕೆಲಸಗಳು ನೆನೆಗುದ್ದಿಗೆ ಬಿದ್ದಿರುವುದರಿಂದ ಹಾಗೂ ಉದ್ಯೋಗ ಖಾತ್ರಿ ಕೆಲಸ ವೇಗವಾಗಿ ನಡೆಯುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ತಾಲೂಕು ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಗೆ ತಾಲೂಕು ದಂಡಾಧಿಕಾರಿ ಗೈರು ಹಾಜರಿಯಾದುದು ಶಾಸಕರ ಆಕ್ರೋಶಕ್ಕೆ ಕಾರಣವಾಯಿತು. ಕುಂದೂರು ಗ್ರಾಮ ಪಂಚಾಯ್ತಿ ಪಿಡಿಓ ಗೆ ಉದ್ಯೋಗ ಖಾತ್ರಿ ಯೋಜನೆಯ ಹಣ ಸರಿಯಾಗಿ ಉಪಯೋಗವಾಗುತ್ತಿಲ್ಲ. ಸಾರ್ವಜನಿಕರಿಗೆ ಸರ್ಕಾರದ ಸವಲತ್ತು ಸರಿಯಾಗಿ ಸಿಗುತ್ತಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧ್ಯಕ್ಷೆ ಹೇಮಾವತಿ ಕೃಷ್ಣನಾಯಕ್, ಉಪಾಧ್ಯಕ್ಷೆ ಶಿಲ್ಪಶ್ರೀನಿವಾಸ್, ಇಓ ಮೃತ್ಯುಂಜಯ ಇದ್ದರು.