ನಗರದಲ್ಲಿ ವಾಜಪೇಯಿ ಹುಟ್ಟುಹಬ್ಬ
ಕ.ಪ್ರ.ವಾರ್ತೆ ಹಾಸನ ಡಿ. 25
ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಮಾಜಿ ಪ್ರಧಾನಿ ವಾಜಪೇಯಿಯವರ 90ನೇ ವರ್ಷದ ಹುಟ್ಟುಹಬ್ಬವನ್ನು ಬುಧವಾರ ನಗರದ ಎಂ.ಕೃಷ್ಣ ಅಂಧ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಬಿ.ಬಿ.ಶಿವಪ್ಪ ಅವರು ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ, ವಾಜಪೇಯಿ ವ್ಯಕ್ತಿತ್ವ ಅಂತರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಪಡೆದಿದೆ. ಅವರು ಬಿಜೆಪಿ ಸಿದ್ಧಾಂತದಲ್ಲಿ ಬೆಳೆದು ಬಂದವರು. ದೇಶದ ಅಭಿವೃದ್ಧಿಗಾಗಿ ತಮ್ಮ ಕಾಲಾವಧಿಯಲ್ಲಿ ಸಾಕಷ್ಟು ಶ್ರಮಿಸಿದಾರೆ ಎಂದು ತಿಳಿಸಿದರು.
ಅಟಲ್ ಕಾರ್ಯವೈಖರಿ ಹಾಗೂ ಸಿದ್ದಾಂತಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಪಕ್ಷಕ್ಕಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕ್ರಮದ ಮೊದಲು ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಎಚ್.ರೇಣುಕುಮಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚನ್ನಕೇಶವ, ಪ್ರಧಾನ ಕಾರ್ಯದರ್ಶಿ ಎಚ್.ಎನ್.ನಾಗೇಶ್, ವಿಜಯಕುಮಾರ್, ಮುಖಂಡ ಎಂ.ಕೆ.ಕಮಲ್ಕುಮಾರ್, ಪ್ರಸನ್ನಕುಮಾರ್, ಗುರುಪ್ರಸಾದ್, ಶ್ರೀನಿವಾಸ್ ಇತರರು ಇದ್ದರು.