ಬೇಲೂರು: ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ
ಬೇಲೂರು: ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆ ಡಿ.26ರಂದು ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಟಿ.ದಾಮೋದರ್ ತಿಳಿಸಿದರು. ಪತ್ರಿಕಾ ಹೇಳಿಕೆ ನೀಡಿರುವ ಅವರು ಗುರುವಾರ ಬೆಳಗ್ಗೆ 11 ಗಂಟೆಗೆ ಇಲ್ಲಿನ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕ ವೈಎನ್.ರುದ್ರೇಶಗೌಡ ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದು, ಕಾರ್ಯಕರ್ತರು ಸಭೆಗೆ ತಪ್ಪದೇ ಹಾಜರಾಗುವಂತೆ ಮನವಿ ಮಾಡಿದ್ದಾರೆ.