ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸಚಿವರ ಭರವಸೆ
ಕ.ಪ್ರ.ವಾರ್ತೆ ಸಕಲೇಶಪುರ ಡಿ. 26
ಕೇಂದ್ರ ವಾಣಿಜ್ಯ ಸಚಿವ ಆನಂದ್ಶರ್ಮಾ ಕಾಫಿ ಬೆಳೆಗಾರರ ನೆರವಿಗೆ ಧಾವಿಸುವುದಾಗಿ ಭರವಸೆ ನೀಡಿದ್ದಾರೆಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಅಧ್ಯಕ್ಷ ಬಿ.ಎಸ್. ಜೈರಾಮ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಮಾಜಿ ಸಚಿವೆ ಮೋಟಮ್ಮ, ಬಿ.ಎಲ್.ಶಂಕರ್ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಸಚಿವ ಆನಂದ್ ಶರ್ಮಾ ಅವರನ್ನು ಭೇಟಿ ಮಾಡಿ ಹತ್ತು ಹೆಕ್ಟೇರ್ ನಂತರದ ಬೆಳೆಗಾರರಿಗೆ ಪ್ಯಾಕೆಜ್ ದೊರಕಿಸಿಕೊಡ ಬೇಕು. ಅಲ್ಲದೆ ಅತಿವೃಷ್ಟಿ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಳು ಮೆಣಸಿಗೆ ಸಹಾಯಧನ ನೀಡ ಬೇಕು. ಏಲಕ್ಕಿ ಬೆಳೆಗಾರರ ಸಾಲಮನ್ನಾ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಸಂಕಷ್ಟದಲ್ಲಿರುವ ಬೆಳೆಗಾರರ ನೆರವಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ಕೆ.ಜಿ.ಎಫ್ ಪ್ರಧಾನ ಕಾರ್ಯದರ್ಶಿ ಯು.ಎಂ. ತೀರ್ಥಮಲ್ಲೇಶ್, ಉಪಾಧ್ಯಕ್ಷ ಕೆ.ಯು. ರತೀಶ್, ಸಂಘಟನಾ ಕಾರ್ಯದರ್ಶಿ ಡಿ.ಎಂ. ವಿಜಯ್, ಎನ್.ಬಿ.ಉದಯ್ಕುಮಾರ್ ,ಕೋಮಾರ್ಕ ಅಧ್ಯಕ್ಷ ಡಿ.ಬಿ.ಸುಬ್ಬೇಗೌಡ ಇದ್ದರು.