ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಲೋಡ್ ಶೆಡ್ಡಿಂಗ್ ವಿರುದ್ಧ ಪ್ರತಿಭಟನೆ, ಮನವಿ

Rashmi Kasaragodu
Updated On : 27 Dec 2013, 1:28 am

ಅರಸೀಕೆರೆ: ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್  ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಗುರುವಾರ ಹಾರನಹಳ್ಳಿಯ ಚೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಾಖಾಧಿಕಾರಿ ರಾಮಶೆಟ್ಟಿಗೆ ಮನವಿ ಸಲ್ಲಿಸಲಾಯಿತು.
  ಪ್ರಸನ್ನಕುಮಾರ್ ಮಾತನಾಡಿ,  ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಮನ ಬಂದಂತೆ ವಿದ್ಯುತ್ ಕಡಿತಮಾಡಲಾಗುತ್ತಿದೆ.
 ಲೋಡ್ಶೆಡ್ಡಿಂಗ್ ಹೆಸರಿನಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.
 ಇದೇ ವೇಳೆ ಗ್ರಾಮಸ್ಥರ ಸಹನೆಯ ಕಟ್ಟೆಯೊಡೆದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರಲ್ಲದೆ,  ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವಂತಹ ಸ್ಥಿತಿ ಎದುರಾಗಿದೆ. ಇದರ ನಡುವೆ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯೇ ಎಂದು ತರಾಟೆಗೆ ತೆಗೆದುಕೊಂಡರು.
ಗ್ರಾಮದ ಕುಮಾರ್, ಶೇಖರಪ, ಲಕ್ಕಮ್ಮ ಇನ್ನಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement