'ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳಸಿ ಕೊಳ್ಳಬೇಕು'
ಹಾಸನ: ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಆನಂದಕೃಷ್ಣ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ಹಾಗೂ ಹಾಸನ ವೃತ್ತದ ಆಶ್ರಯದಲ್ಲಿ ಅಂತರ ವಿದ್ಯುತ್ ಕಂಪನಿಗಳ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ಇಂತಹ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿದ್ಯುತ್ ಕಂಪನಿಗೆ ಉತ್ತಮ ಹೆಸರನ್ನು ತಂದುಕೊಡಬೇಕು. ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಸಾಧನೆ ಮಾಡುವಂತೆ ಕಿವಿಮಾತು ಹೇಳಿದರು.
ಮೈಸೂರು ಜಾ.ವಿ.ಸ.ನಿ.ನಿ. ಮುಖ್ಯ ಇಂಜಿನಿಯರ್ ಹಾಗೂ ಅಧ್ಯಕ್ಷರಾದ ಎಂ. ಶಾಂತಿ ಕಾರ್ಯಕ್ರಮ ಉದ್ಘಾಟಿಸಿದರು. ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ ನಾಗೇಶ್, ಎಸ್.ಆರ್. ಪ್ರಸಾದ್, ಅಧೀಕ್ಷಕ ಎಂಜಿನಿಯರ್ ಸತ್ಯನಾರಾಯಣ, ಬಿ. ವೈರಮುಡಿ, ಟಿ. ನಾಗರಾಜ್, ವೀಕ್ಷಕ ಶೇಖರ್, ಸುಬ್ರಮಣ್ಯ ಇದ್ದರು.