ಬೈಕ್ ಸವಾರ ಸಾವು
ಹಾಸನ: ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೆ. ಆಲದಹಳ್ಳಿ ಗ್ರಾಮದ ದೇವೆಂದ್ರ(23) ಮೃತಪಟ್ಟ ದುರ್ದೈವಿ. ತಮ್ಮ ಯೋಗೇಶ್ ಅವರು ಹಾಸನ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜೂಜು: ಬಂಧನ
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಜೂಜಾಡುತ್ತಿದ್ದ 14 ಜನರನ್ನು ಬಂಧಿಸಿದ್ದು, 7 ಬೈಕ್ಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿ ಬುರುಡಾಳು ಬಾರೆ ಫಾರೆಸ್ಟ್ನಲ್ಲಿ ಅಂದರ್ಬಾಹರ್ಜೂಜಾಟಾಡುತ್ತಿದ್ದಾಗ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಜೂಜಾಡುತ್ತಿದ್ದ ಸ್ವಾಮಿ (28), ಸತ್ಯ (36), ಲೋಕೇಶ್ (31), ದುಶ್ಯಂತ್ (29), ಚಂದ್ರ (25) ಮತ್ತು ಸ್ವಾಮಿ (34) ಎಂಬವರನ್ನು ಬಂಧಿಸಿದ್ದು, ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು ರು. 3350 ನಗದು ಮತ್ತು ಸ್ಥಳದಲ್ಲಿದ್ದ 4 ಹಿರೋ ಹೋಂಡಾ ಬೈಕ್ಗಳು ಮತ್ತು 3 ಪಲ್ಸರ್ ಸೇರಿದಂತೆ ಬಜಾಜ್ ಸಿಡಿ-100ನ್ನು ವಶಪಡಿಸಿಕೊಂಡು, ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿ ಬೆಂಡೆಕೆರೆ ಗ್ರಾಮದ ಶೆಟ್ಟಿಕಟ್ಟೆಯಮ್ಮನ ದೇವಸ್ಥಾನದ ಹತ್ತಿರ ಅಂದರ್ ಬಾಹರ್ ಜೂಜಾಟಾಡುತ್ತಿದ್ದಾಗ, ಪಿಎಸ್ಐ ನರೇಂದ್ರಕುಮಾರ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ, ಜೂಜಾಡುತ್ತಿದ್ದ ಎಚ್.ಎಸ್. ಗೋಪಾಲ, ಮಂಜುನಾಥ, ಕುಮಾರನಾಯ್ಕ್, ಸುರೇಶ್, ನಾಗರಾಜ, ಮಣಿ ಸೇರಿದಂತೆ ಮತ್ತಿಬ್ಬರನ್ನು ಬಂಧಿಸಿದ್ದು, ಸುಮಾರು ರು. 12,210 ನಗದನ್ನು ವಶಪಡಿಸಿಕೊಂಡು ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಅಕ್ರಮ ಮದ್ಯ ವಶ
ಹಾಸನ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿ ಲಕ್ಕೇನಹಳ್ಳಿ ಗ್ರಾಮ ವಾಸಿ ಗಿರಿಯಾಭೋವಿ (55) ಎಂಬವರ ಮನೆಯ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಪಿಎಸ್ಐ ಮೋಹಿತ್ ಸಹಾದೇವ್ ದಾಳಿ ನಡೆಸಿ ಅವರನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿದ್ದ ಸುಮಾರು ರು. 1859 ಬೆಲೆಯ 90 ಎಂಎಲ್ನ 77 ರಾಜವಿಸ್ಕಿ ಬಾಟಲಿಗಳನ್ನು ವಶಪಡಿಕೊಂಡಿದ್ದಾರೆ. ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಾಪತ್ತೆ
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಯುವತಿಯರಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನ ವಿದ್ಯುತ್ ನಗರ ವಾಸಿ ಸುರೇಂದ್ರಅವರ ಪುತ್ರಿ ಮೇಘಶ್ರೀ(18) ಮನೆಯಿಂದ ಹೊರಗೆ ಹೋದವಳು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ.
ಚಹರೆ: 5 ಅಡಿ ಎತ್ತರ, ಗೋದಿ ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು, ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಪಿಂಕ್ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ.
ಮತ್ತೊಂದು ಪ್ರಕರಣದಲ್ಲಿ ಅರಸೀಕೆರೆ ತಾಲ್ಲೂಕಿನ ಕಸಬಾ ಹೋಬಳಿ, ಮುದ್ದನಹಳ್ಳಿ ಗ್ರಾಮ ವಾಸಿ ಇಂದಿರಾಬಾಯಿ ಅವರ ಪುತ್ರಿ ಪುಷ್ಪಾಬಾಯಿ (22) ಅರಸೀಕೆರೆ ಪಟ್ಟಣಕ್ಕೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ.
ಚಹರೆ: 5.2 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಬ್ರೌನ್ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ. ತಾಯಿ ಇಂದಿರಾಬಾಯಿ ರವರು ಅರಸೀಕೆರೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇಂದು ಕುವೆಂಪು ಜನ್ಮ ದಿನಾಚರಣೆ
ಹಾಸನ: ಜಿಲ್ಲಾ ಕಸಾಪ ಭವನದಲ್ಲಿ ಡಿ. 29ರಂದು ಬೆಳಗ್ಗೆ 10ಕ್ಕೆ ಕುವೆಂಪು ಜನ್ಮದಿನಚಾರಣೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕುರಿತಾದ ರಸ ಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಖ್ಯಾತ ಗಾಯಕರಿಂದ ಕುವೆಂಪು ಗೀತಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ರಸಪ್ರಶ್ನೆ ವಿಜೇತರಿಗೆ ಇದೇ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್. ಜನಾರ್ಧನ್ ಕೋರಿದ್ದಾರೆ.