66 ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್'
ಆಲೂರು: ವಿದ್ಯಾವಂತ ಯುವಜನತೆಯ ಜೊತೆಗೆ ದೇಶಕ್ಕೆ ಆರೋಗ್ಯವಂತ ಯುವ ಜನತೆ ಅತ್ಯವಶ್ಯಕವಾದದ್ದು. ಆರೋಗ್ಯವಂತ ಯುವ ಜನರನ್ನು ರೂಪಿಸುವಲ್ಲಿ ರೆಡ್ ರಿಬ್ಬನ್ ಕ್ಲಬ್ಗಳು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಹಾಸನದಲ್ಲಿ ಆರೋಗ್ಯ ಇಲಾಖೆ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ವತಿಯಿಂದ 66 ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್ಗಳನ್ನು ಆರಂಭಿಸಲಾಗಿದೆ. ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಜಿಲ್ಲಾ ಮೇಲ್ವಿಚಾರಕರಾದ ರವಿಕುಮಾರ್ ತಿಳಿಸಿದ್ದಾರೆ.
ವಿದ್ಯಾವಂತರಲ್ಲೂ ಸೋಂಕು: ತಾಲೂಕಿನ ಕಣತೂರಿನ ಪದವಿ ಪೂರ್ವಕಾಲೇಜಿನಲ್ಲಿ ಇತ್ತೀಚೆಗೆ ರೆಡ್ರಿಬ್ಬನ್ ಕ್ಲಬ್ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸ ನೀಡುತ್ತಾ ಮಾತನಾಡಿ, ರಾಷ್ಟ್ರ, ರಾಜ್ಯ, ಜಿಲ್ಲಾ ಅಂಕಿ- ಅಂಶಗಳನ್ನು ನೀಡುತ್ತಾ, ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ಹೆಚ್ಐವಿ, ಏಡ್ಸ್ ಸೋಂಕಿತರಲ್ಲಿ ಮೊದಲ ಸ್ಥಾನದಲ್ಲಿದೆ.
ಹಾಸನ ತಾಲ್ಲೂಕು 2ನೇ ಸ್ಥಾನದಲ್ಲಿದೆ ಇತ್ತೀಚಿನ ದಿನಗಳಲ್ಲಿ ಯುವ ಜನರು ಜನರು ಹಾಗೂ ವಿದ್ಯಾವಂತರಲ್ಲಿ ಹೆಚ್ಚಾಗಿ ಸೋಂಕು ಕಂಡು ಬರುತ್ತಿರುವುದು ತುಂಬಾ ಆಘಾತಕಾರಿ ವಿಷಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಐವಿ, ಏಡ್ಸ್ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಣತೂರು ಗ್ರಾಮಪಂಚಾಯ್ತಿ ಅಧ್ಯಕ್ಷ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಗುಲಾಬ್ ನಬಿ ಆಜಾದ್, ಆರೋಗ್ಯ ಇಲಾಖೆಯ ಲೋಕೆಶ್, ಶ್ವೇತಾ ಇದ್ದರು.