ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಗಣಿಗಾರಿಕೆಗೆ ಅವಕಾಶ ನೀಡಿದರೆ ಪ್ರತಿಭಟನೆ

Rashmi Kasaragodu
Updated On : 31 Dec 2013, 1:49 am

ಕ.ಪ್ರ.ವಾರ್ತೆ    ಅರಸೀಕೆರೆ    ಡಿ. 30
ಹಾರನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡತೆ ಇರುವ ಹೆಬ್ಬಾರನಹಳ್ಳಿ ಗ್ರಾಮದ ಆಸುಪಾಸಿನಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಹಾರನಹಳ್ಳಿ ಗ್ರಾಮ ಪಂಚಾಯ್ತಿ  ಮಾಜಿ ಅಧ್ಯಕ್ಷ ಗೌಸ್ಖಾನ್, ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಆರೋಪ: ಗಣಿಗಾರಿಕೆ ಸಂಬಂಧ ಪ್ರಕ್ರಿಯೆಗಳು ಚುರುಕುಗೊಂಡಿರುವುದು ಆತಂಕಕಾರಿ ಸಂಗತಿಯಾಗಿದೆ ಗ್ರಾಮದ ಸುತ್ತಮುತ್ತ ಫಲವತ್ತಾದ ಕೃಷಿ ಜಮೀನಿದ್ದು ನೂರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಗಣಿಗಾರಿಕೆ ಆರಂಭಿಸಲು ಅನುಮತಿ ನೀಡಬಾರದೆಂದು ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದೆ ಅಲ್ಲದೆ ಆಕ್ಷೇಪಣೆಯನ್ನು ಸಲ್ಲಿಸಲಾಗಿದೆ. ಪರಿಸ್ಥಿತಿ ಈಗಿದ್ದರೂ ಗಣಿ ಮತ್ತು ಭೂಗರ್ಭ ಇಲಾಖೆಯ ಅಧಿಕಾರಿಗಳು ಗಣಿಗಾರಿಕೆಯ ಮಾಫಿಯಾದೊಂದಿಗೆ ಶಾಮಿಲಾಗಿದ್ದಾರೆಂದು ಆರೋಪಿಸಿದ್ದಾರೆ.
ಅನುಮುತಿ ನೀಡಿದರೆ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆಗೆ ಸಜ್ಜಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿದ್ದಾರೆ. ಈ ಹಿಂದೆ ಕಲ್ಲುಗಣಿಗಾರಿಕೆಗೆ ಅವಕಾಶ ನೀಡದಂತೆ ರೈತ ಮುಖಂಡ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement