ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಗಜೀವನ್ ಅಪ್ರತಿಮ ರಾಜಕೀಯ ಮೇಧಾವಿ'

Rashmi Kasaragodu
Updated On : 31 Dec 2013, 1:51 am

ಅರಸೀಕೆರೆ: ದೀನ ದುರ್ಬಲರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಡಾ. ಬಾಬು ಜಗಜೀವನ್ ರಾಂ ದೇಶ ಕಂಡ ಅಪ್ರತಿಮ ರಾಜಕೀಯ ಮೇಧಾವಿ ಹಾಗೂ ಮಹಾನ್ ವ್ಯಕ್ತಿಯಾಗಿದ್ದರು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
ಸಲಹೆ: ತಾಲೂಕಿನ ಅಣ್ಣಾಯಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಡಾ.ಬಾಬು ಜಗಜೀವನ್ ರಾಂ ಯುವಕ ಸಂಘವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದ ಅವರು, ಬಡತನದಲ್ಲಿಯೇ ಹುಟ್ಟಿ ಬಡತನದಲ್ಲಿಯೇ ಬೆಳೆದು ಬದುಕು ಕಟ್ಟಿಕೊಂಡ ಮಹಾನ್ ಚೇತನವಾಗಿದ್ದ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು. ಅಲ್ಲದೆ ಅವರ ಅಳವಡಿಸಿಕೊಂಡಿದ್ದ ಆದರ್ಶ, ಚಿಂತನೆ, ಮೌಲ್ಯಯುತ ಬದುಕು ತಮಗೆಲ್ಲರಿಗೂ ಮಾದರಿಯಾಗಬೇಕು. ಈ ನಿಟ್ಟಿನಲ್ಲಿ ಸಂಘ ಕಾರ್ಯೋನ್ಮುಖವಾಗಬೇಕೆಂದು ಸಲಹೆ ನೀಡಿದರು.
ಭರವಸೆ: ಇದೇ ವೇಳೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಗ್ರಾಮಕ್ಕೆ ಒದಗಿಸುವುದಾಗಿ ಭರವಸೆ ನೀಡಿದರು.
ತಾಪಂ ಅಧ್ಯಕ್ಷ ಹೆಚ್.ಟಿ. ಶಿವಮೂರ್ತಿ, ಗೀಜಿಹಳ್ಳಿ ಗ್ರಾಪಂ ಅಧ್ಯಕ್ಷ ವೈ.ಆರ್.ನಾಗರಾಜ್, ಮಾಜಿ ಅಧ್ಯಕ್ಷ ಧರ್ಮಶೇಖರ್, ಪುರಸಭೆ ಮಾಜಿ ಅಧ್ಯಕ್ಷ ಸಮೀವುಲ್ಲಾ ಇತರರು ಮಾತನಾಡಿದರು. ಸಂಘದ ನೂತನ ಅಧ್ಯಕ್ಷ ಶಿವಣ್ಣ, ರಂಗಸ್ವಾಮಿ, ಮಂಜುನಾಥ್, ಶಿವಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement