ಕಾರುಗಳ ಡಿಕ್ಕಿ: ಐವರಿಗೆ ಗಂಭೀರ ಗಾಯ
ಕ.ಪ್ರ.ವಾರ್ತ್ಣೆ ಬೇಲೂರು ಡಿ 31
ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, 5 ಜನರಿಗೆ ಗಂಭೀರ ಗಾಯವಾದ ಘಟನೆ ಸೋಮವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಕ್ಕೋಡು ರಸ್ತೆಯ ಕೆರಲೂರು ಗಡಿಯ ಬಳಿ ಮಾರುತಿ ಆಲ್ಟೋ ಕಾರಿನಲ್ಲಿ ಸುಬ್ರಮಣ್ಯದಿಂದ ಪ್ರವಾಸ ಮುಗಿಸಿಕೊಂಡು ವಾಪಸ್ಸು ದಾವಣಗೆರೆ ಬೇಲೂರು ಮಾರ್ಗವಾಗಿ ಹೋಗುವಾಗ ಎದುರಿನಿಂದ ಬಂದ ಮಾರುತಿ 800 ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಎರಡು ಕಾರುಗಳು ಜಖಂಗೊಂಡು ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಬೀರ ಗಾಯಗಳಾಗಿವೆ. ಗಾಯಗೊಂಡವರನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕ್ಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೇಟಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಶ್ವಿನ್ ಕುಮಾರ್ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಪ್ರಯಾಣಿಕರ ಆಟೋ ಪಲ್ಟಿ: ಮತ್ತೊಂದು ಪ್ರಕರಣದಲ್ಲಿ ಸೋಮವಾರ ಸಂಜೆ ಸುಮಾರು 5-30 ರ ಸಮಯದಲ್ಲಿ ಬೇಲೂರಿನ ಗೆಂಡೇಹಳ್ಳಿ ರಸ್ತೆಯಲ್ಲಿರುವ ಕಳಸಿನ ಕೆರೆ ಏರಿಯ ಬಳಿ ಜನರನ್ನು ತುಂಬಿಸಿಕೊಂಡು ಬರುತ್ತಿದ್ದ ಬಜಾಜ್ ಆಟೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 10 ಅಡಿ ಆಳದ ಕಂದಕಕ್ಕೆ ಉರುಳಿ ಕೊಂಡಿರುತ್ತದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ.