ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕೆಲಸ ಸಿಕ್ಕ ಮೇಲೆ ಆರೋಗ್ಯ ನಿರ್ಲಕ್ಷ್ಯ

Parashurama
Updated On : 1 Feb 2013, 10:16 am

ಮೈಸೂರು: ಸರ್ಕಾರಿ ನೌಕರರು ದೈಹಿಕವಾಗಿ ದೃಢವಾಗಿದ್ದರೆ ಮಾತ್ರ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘ ಶುಕ್ರವಾರ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರಲ್ಲಿಯೂ ಕ್ರೀಡಾ ಮನೋಭಾವ ಇರಬೇಕು. ಈ ಹಿನ್ನೆಲೆಯಲ್ಲಿ ಕ್ರೀಡಾಕೂಟ ಆಯೋಜಿಸಿದೆ. ಸರ್ಕಾರಿ ಕೆಲಸ ಸಿಕ್ಕಿದ ಮೇಲೆ ನಮ್ಮ ಜೀವನದಲ್ಲಿ ಯಾವುದೇ ತೊಂದರೆ ಇರುವುದಿಲ್ಲ ಎಂಬ ಭಾವನೆ ಎಲ್ಲರಲ್ಲಿಯೂ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ದೈಹಿಕವಾಗಿ ಆರೋಗ್ಯವಾಗಿಲ್ಲದಿದ್ದರೆ ಮಾನಸಿಕವಾಗಿಯೂ ಕುಗ್ಗುತ್ತಾರೆ. ಆಗ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರು.
ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಮಾತನಾಡಿ, ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಇರಬೇಕು. ರಾಜಕಾರಣಿಗಳಿಗಿಂತ ಹೆಚ್ಚಿನ ಸವಲತ್ತು ನಿಮಗೆ ದೊರಕಬೇಕು ಎಂದರು.
ಮುನಿಸು ತರವೇ?: ಶಾಸಕ ಶಂಕರಲಿಂಗೇಗೌಡ ಅವರು ಭಾಷಣ ಮುಗಿಸುತ್ತಿದ್ದಂತೆಯೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಕಾರ್ಯಕ್ರಮಕ್ಕೆ ಆಗಮಿಸಿದರು. ಭಾಷಣ ಮುಗಿಸುತ್ತಲೇ ವೇದಿಕೆಯ ಎಡ ಬದಿಯ ಮೆಟ್ಟಿಲಿಳಿದು ಶಂಕರಲಿಂಗೇಗೌಡ ಹೊರ ಹೋದರು. ವೇದಿಕೆಯ ಬಲ ಭಾಗದಿಂದ ರಾಮದಾಸ್ ವೇದಿಕೆ ಏರಿದರು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದ ವಿವಿಧ ಇಲಾಖೆಯ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕ್ರೀಡಾಕೂಟದ ಅಂಗವಾಗಿ ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಟೆನಿಕಾಯ್ಟ್, ವೆಯ್ಟ್‌ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್ಸ್, ಚೆಸ್, ಬ್ಯಾಡ್ಮಿಂಟನ್, ಥ್ರೋಬಾಲ್, ಟೇಬಲ್ ಟೆನ್ನಿಸ್, ಕರಕುಶಲ ಪ್ರದರ್ಶನ, ಸಾಂಸ್ಕೃತಿಕ ಸ್ಪರ್ಧೆಗಳು, ಕುಸ್ತಿ, ಕೇರಂ ಸ್ಪರ್ಧೆ ನಡೆಯಲಿದೆ. ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್‌ನಲ್ಲಿ ಫುಟ್‌ಬಾಲ್, ಹಾಕಿ, ಮೈಸೂರು ಟೆನಿಸ್ ಕ್ಲಬ್‌ನಲ್ಲಿ ಟೆನಿಸ್, ನೌಕರರ ಸಂಘದ ಕಟ್ಟಡದಲ್ಲಿ ಬ್ರಿಡ್ಜ್, ಕನ್ನೇಗೌಡನ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮತ್ತು ಮೈಸೂರು ವಿವಿ ಈಜುಗೊಳದಲ್ಲಿ ಈಜು ಸ್ಪರ್ಧೆ ನಡೆಯಲಿದೆ.
ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎಸ್.ಡಿ. ಮಹೇಂದ್ರ, ಜಿಲ್ಲಾಧಿಕಾರಿ ಡಾ.ಕೆ.ಎಸ್. ರಾಮೇಗೌಡ, ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯಕ್, ಉಪ ವಿಭಾಗಾಧಿಕಾರಿ ಬಸವರಾಜು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್,  ಎಚ್.ಕೆ. ರಾಮು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments