ಬಕ್ಕಪ್ಪನಕೊಪ್ಪಲಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ
ಜಾವಗಲ್: ಸಮೀಪದ ಬಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಕ್ಕಪ್ಪನ ಕೊಪ್ಪಲಿನಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ನೀರಿಗಾಗಿ ಹಾಹಾಕಾರ ಪಡಬೇಕಾದ ಪರಿಸ್ಥಿತಿ ಉಂಟಾಗಿದೆ. ಗ್ರಾಮದಲ್ಲಿ 135 ಕುಟುಂಬಗಳಿದ್ದು 3 ಕೊಳವೆ ಬಾವಿಗಳಲ್ಲೂ ನೀರಿಲ್ಲದೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಕೆಲವು ಕೊಳವೆ ಬಾವಿಗಳು ಕೆಟ್ಟು ಹೋಗಿವೆ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಅನುಕೂಲ ಮಾಡಿಕೊಡ ಬೇಕೆಂದು ಜಾವಗಲ್ ಹೋಬಳಿ ದಲಿತ ಸಂಘರ್ಷ ಸಮಿತಿ ಸಂಚಾಲಕ ಅಣ್ಣಯ್ಯ ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.